ದಾವಣಗೆರೆ : 2023-24ನೇ ಸಾಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ.(ವಿಜ್ಞಾನ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75 ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25 ರಷ್ಟು ಪ್ರವೇಶಕ್ಕೆ ಅವಕಾಶವಿದ್ದು, ಅಭ್ಯರ್ಥಿಗಳು ಆಗಸ್ಟ್ 10 ರೊಳಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದಾವಣಗೆರೆ ಇಲ್ಲಿಗೆ ಅರ್ಜಿ ಪಡೆದು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಳಿಗಾಗಿ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ದಾವಣಗೆರೆ ದೂ.08192250022, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ ಹೊಸಕುಂದುವಾಡ ಗ್ರಾಮ ದೂ.9916828601, ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಕೆರೆಬಿಳಚಿ ಚನ್ನಗಿರಿ ದೂ.9483075634, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ದೂ.9164855466ಗೆ ಸಂಪರ್ಕಿಸಬಹುದೆಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
