ಹೊಸ ಪದವಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
ದಾವಣಗೆರೆ ( ಚನ್ನಗಿರಿ ) : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಂತೇಬೆನ್ನೂರು ಚನ್ನಗಿರಿ.ತಾ ಇಲ್ಲಿ ಈಗಾಗಲೇ ಬಿ.ಎ, ಬಿಕಾಂ, ಬಿಎಸ್ಸಿ, ಕೋರ್ಸುಗಳ ಪ್ರವೇಶಾತಿ ಪ್ರಾರಂಭವಾಗಿದ್ದು, ಪ್ರಸಕ್ತ ಸಾಲಿನಿಂದ ಬಿಬಿಎಂ ಟೂರಿಸಂ ಮ್ಯಾನೇಜ್‍ಮೆಂಟ್ ಕೋರ್ಸ್ ಅನ್ನು ಹೊಸದಾಗಿ ಪ್ರಾರಂಭಿಸಲಾಗಿದೆ. ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರಾದ ಹೆಚ್.ಗಿರಿಸ್ವಾಮಿ ಮೊ.ಸಂ: 9731530443 ಇವರನ್ನು ಸಂಪರ್ಕಿಸಲು ಕೋರಲಾಗಿದೆ.