ಪ್ರೇರಣಾ ಸಾಂಸ್ಕೃತಿಕ ಸಂಸ್ಥೆಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಪ್ರೇರಣಾ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ಪ್ರೇರಣಾ ಪ್ರತಿಭಾ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ75ಕ್ಕಿಂತ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಜುಲೈ 23 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಚನ್ನಗಿರಿ ವಿರುಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ಸಂಸ್ಥೆಯಿಂದ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮೊ: 9731424099, 9731289333 ಸಂಪರ್ಕಿಸುವಂತೆ ಸಂಸ್ಥೆಯ ಅಧ್ಯಕ್ಷರಾದ ಚೇತನ ಶಿವಕುಮಾರ್ ತಿಳಿಸಿದ್ದಾರೆ.