ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ : ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಸಿ.ಬಿ.ಎಸ್.ಇ ಪಠ್ಯಕ್ರಮದ ಪಿ.ಸಿ.ಎಂ.ಬಿ ವಿಷಯಗಳಿಗೆ ವ್ಯಾಸಂಗ ಮಾಡಲು 2023-24ನೇ ಸಾಲಿನ ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದಾಖಲಾತಿ ಪಡೆಯಲು ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75 ರಷ್ಟು ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಪ್ರವೇಶ ಲಭ್ಯವಿದೆ. ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ದಾಖಲಾತಿಗಾಗಿ ಪೋಷಕರ ಆದಾಯ ಮಿತಿ ರೂ.2.50 ಲಕ್ಷಗಳಿಗೆ ಮೀರಬಾರದು.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಮೇ 25 ರೊಳಗಾಗಿ ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜು, ಕೊಂಡಜ್ಜಿ ಗ್ರಾಮ, ಹರಿಹರ ಇಲ್ಲಿ ಅರ್ಜಿಗಳನ್ನು ಪಡೆದು ಸಲ್ಲಿಸಬೇಕು. ಹಾಗೂ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಳಿಗಾಗಿ ಮೊ:9008815296 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಅಧಿಕಾರಿಗಳು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.