ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ.ಡಿ.16 (ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಗುಮಾಸ್ತ ಮತ್ತು ಕಿರಿಯ ಸಹಾಯಕ ಕಾರ್ಯದರ್ಶಿ ಮತ್ತು ದತ್ತಾಂಶ ನಮೂದಕ ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಕಂಬ್ಯೆನ್ಡ್ ಹೈಯರ್ ಸೆಕೆಂಡರಿ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಆಸಕ್ತ ಅಭ್ಯರ್ಥಿಗಳು ದಿ:04.01.2023 ರೊಳಗಾಗಿ  ವೆಬೆಸೈಟ್ hಣಣಠಿs://ssಛಿ.ಟಿiಛಿ.iಟಿ oಡಿ ತಿತಿತಿ.ssಞಞಡಿ.ಞಚಿಡಿ.ಟಿiಛಿ.iಟಿ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 080-25502520/9483862020 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂ.ಸಂ: 08192-259446 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!