ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ದಾವಣಗೆರೆ : ದಾವಣಗೆರೆ ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಖಾಲಿ ಇರುವ 2 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 33 ಸಹಾಯಕಿಯರು ಹಾಗೂ ಜಗಳೂರು ತಾಲ್ಲೂಕಿನಲ್ಲಿ 2 ಅಂಗನವಾಡಿ ಕಾರ್ಯಕರ್ತೆಯರು 14 ಸಹಾಯಕಿಯರು, ಹೊನ್ನಾಳಿ ತಾಲ್ಲೂಕಿನಲ್ಲಿ 5 ಅಂಗನವಾಡಿ ಕಾರ್ಯಕರ್ತೆಯರು 7 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಆಯಾ ತಾಲ್ಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಏಪ್ರಿಲ್ 29 ರ ಒಳಗಾಗಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ದೂ.ಸಂ.08192-263219, ಜಗಳೂರು 08196-227132, ಹೊನ್ನಾಳಿ 08188-251283 ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ವಾಸಾಂತಿ ಉಪ್ಪಾರ್ ತಿಳಿಸಿದ್ದಾರೆ.