ಲೋಕಲ್ ಸುದ್ದಿ

Application: ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ Application ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯುಜಿಸಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ವಿಜ್ಞಾನ, ಸಮಾಜ ವಿಜ್ಞಾನ, ಗ್ರಾಮೀಣಾಭಿವೃದ್ಧಿ ಅಥವಾ ಪರಿಸರ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಸ್ನಾತಕೋತ್ತರ ಪದವಿ ಪಡೆದ, ವಿಪತ್ತು ನಿರ್ವಹಣೆಯಲ್ಲಿ 3-5 ವರ್ಷ ಅನುಭವವುಳ್ಳವರಾಗಿರಬೇಕು.
ಭಾರತೀಯ ವಿಪತ್ತು ನಿರ್ವಹಣೆ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯ ಜ್ಞಾನ ಹೊಂದಿದ, ಕನ್ನಡ ಮತ್ತು ಇಂಗ್ಲೀಷ್ ಬಾಷೆಯ ಸಂವಹನ ಕೌಶಲ್ಯ ಹೊಂದಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯ ಶೈಕ್ಷಣಿಕ, ಸ್ವವಿವರ, ಅನುಭವದ ದಾಖಲಾತಿಗಳೊಂದಿಗೆ ಜಿಲ್ಲಾಧಿಕಾರಿಗಳು(ಜಿಲ್ಲಾ ವಿಪತ್ತು ನಿರ್ವಹಣಾ ಶಾಖೆ), ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಜಿಲ್ಲೆ. ವಿಳಾಸಕ್ಕೆ ಜೂ.20ರ ಒಳಗಾಗಿ ರಿಜಿಸ್ಟರ್ ಅಂಚೆ ಮೂಲಕ ಕಳುಹಿಸಬೇಕು. ಸಂದರ್ಶನದ ವೇಳೆ ಮೂಲ ದಾಖಲಾತಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.9945235035 ಸಂಪರ್ಕಿಸಬಹುದು.

Click to comment

Leave a Reply

Your email address will not be published. Required fields are marked *

Most Popular

To Top