ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಅರ್ಜಿ ಆಹ್ವಾನ

ದಾವಣಗೆರೆ: ಉಪ್ಪಾರ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ನೀರಾವರಿ ಸೌಲಭ್ಯ ಪಡೆಯಲು  ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

ಪ್ರವರ್ಗ-1ರಡಿಯಲ್ಲಿ ಬರುವ  ಉಪ್ಪಾರ ಮತ್ತು ಇದರ ಉಪಜಾತಿಗೆ ಒಳಪಡುವ  ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮಾರ್ಚ 2 ರೊಳಗಾಗಿ ಆನ್‍ಲೈನ್‍ನ ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂ : 7026288888, ಜಿಲ್ಲಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ಹಾಗೂ ಜಾಲತಾಣs http://upparadevelopment.karnataka.gov.in  ಸಂಪರ್ಕಿಸಲು ಕರ್ನಾಟಕ ಉಪ್ಪಾರ ಅಭಿವೃದ್ಧಿ  ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!