ಲೋಕಲ್ ಸುದ್ದಿ

Application; ಪಾಲಿಹೌಸ್, ಪ್ರಾಥಮಿಕ ಸಂಸ್ಕರಣಾ ಘಟಕಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ, ಆ. 17: ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ತೋಟಗಾರಿಕೆ ಇಲಾಖೆ (Horticulture Department) ವತಿಯಿಂದ 2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಬೆಳೆಗಳಾದ ಕಾಳು ಮೆಣಸು, ಅಂಗಾAಶ ಬಾಳೆ, ತರಕಾರಿ, ಹೂವುಗಳು, ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಪ್ಯಾಕ್ ಹೌಸ್, ಪಾಲಿಹೌಸ್, ಪ್ರಾಥಮಿಕ ಸಂಸ್ಕರಣಾ ಘಟಕಗಳನ್ನು ನಿರ್ಮಿಸಲು ರೈತರಿಂದ ಅರ್ಜಿ (application) ಆಹ್ವಾನಿಸಲಾಗಿದೆ.

ಆಸಕ್ತ ರೈತರು ಜಮೀನಿನ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕದ ಜೆರಾಕ್ಸ್ ಪ್ರತಿಯೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಲ್ಲಾ ಪಂಚಾಯಿತಿ) ಹೊನ್ನಾಳಿ ಕಛೇರಿಯಲ್ಲಿ ಹಾಗೂ ಹೋಬಳಿವಾರು ರೈತ ಸಂಪರ್ಕ ಕೇಂದ್ರಗಳಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಆ.23ರ ಒಳಗಾಗಿ ಅರ್ಜಿಗಳನ್ನು  ಸಲ್ಲಿಸಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Most Popular

To Top