ಬೀದಿ ಬದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ ನಿಧಿಯ ವಿಶೇಷ ಕಿರು ಸಾಲ ಸೌಲಭ್ಯ ಯೋಜನೆಯಡಿ ಮಲೆಬೆನ್ನೂರು ಪುರಸಭಾ ವ್ಯಾಪ್ತಿಯ ಬೀದಿ ಬದಿ ವ್ಯಾಪರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಫಲಾನುಪೇಕ್ಷಿಗಳು ಅಗತ್ಯ ದಾಖಲೆಗಳೊಂದಿಗೆ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಪಿ.ಎಂ ಸ್ವ-ನಿಧಿ ಆನ್ಲೈನ್ ಪರ್ಟಲ್ http://pmsvanidhi.mohua.gov.in/ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮಲೆಬೆನ್ನೂರು ಪುರಸಭೆಯ ಡೇ-ನಲ್ಮ್ ಶಾಖೆ ಸಂಪರ್ಕಿಸಲು ಮಲೆಬೆನ್ನೂರು ಪುರಸಭಾ ಮುಖ್ಯಾಧಿಕಾರಿ ಪ್ರಕಟಣೆ ತಿಳಿಸಿದ್ದಾರೆ.