application; ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ದಾವಣಗೆರೆ, ಆ. 18 : ಸಿಬ್ಬಂದಿ ನೇಮಕಾತಿ ಆಯೋಗದ(ಎಸ್.ಎಸ್.ಸಿ) ವತಿಯಿಂದ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪಿ.ಯು.ಸಿ., ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಹಾಗೂ ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಹರಾಗಿದ್ದು, ಗ್ರೇಡ್-ಸಿ ಹುದ್ದೆಗೆ 30 ವರ್ಷಗಳು, ಗ್ರೇಡ್-ಡಿ ಹುದ್ದೆಗೆ 18 ರಿಂದ 27 ವರ್ಷ ವಯೋಮಿತಿ ಹೊಂದಿರಬೇಕು.

Application : ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಿಲ್ಲ; ವರ್ಷವಿಡೀ ಸಲ್ಲಿಕೆಗೆ ಅವಕಾಶ

ಆಸಕ್ತರು ಆಗಸ್ಟ್ 23 ರೊಳಗಾಗಿ ವೆಬೆಸೈಟ್ http://ssc.nic.in  ಅಥವಾ www.ssckkr.kar.nic.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂ. ಸಂ. 7406323294 ಗೆ ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ. ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!