ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಪಿಯುಸಿ ಗೆ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿಯುತ ಪದವಿ ಪೂರ್ವ ಕಾಲೇಜುಗಳಿಗೆ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
10 ನೇ ತರಗತಿ ವ್ಯಾಸಂಗ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಸಮೀಪದ ವಸತಿ ಕಾಲೇಜುಗಳಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿ, ಶಾಲಾ ಎಸ್.ಎ.ಟಿ.ಎಸ್. ನಂಬರ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ತಾವು ವ್ಯಾಸಂಗ ಮಾಡಲು ಬಯಸುವ ವಸತಿ ಕಾಲೇಜಿನ ಹೆಸರನ್ನು ಸ್ಪಷ್ಟವಾಗಿ ನಮೂದಿಸಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗದ ಪ್ರವರ್ಗ-1 ವಿದ್ಯಾರ್ಥಿಗಳಿಗೆ ಆದಾಯ ಮಿತಿ ರೂ. 2,50,000 ಹಾಗೂ ಹಿಂದುಳಿದ ವರ್ಗದ 2ಎ, 2ಬಿ, 3ಎ ಮತ್ತು 3ಬಿ ವಿದ್ಯಾರ್ಥಿಗಳಿಗೆ ಆದಾಯ ಮಿತಿ ರೂ.1 ಲಕ್ಷ ನಿಗದಿ ಪಡಿಸಲಾಗಿದೆ. ಆಗಸ್ಟ್ 23 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ವಸತಿ ಕಾಲೇಜುಗಳ ವಿವರ: ಮೊರಾರ್ಜಿ ದೇಸಾಯಿ ವಸತಿಯುತ ವಿಜ್ಞಾನ ಪದವಿ ಪೂರ್ವ ಕಾಲೇಜು, ಆವರಗೊಳ್ಳ, ದಾವಣಗೆರೆ. ಹಾಗೂ ಮೊರಾರ್ಜಿ ದೇಸಾಯಿ ವಸತಿಯುತ ವಿಜ್ಞಾನ ಪದವಿ ಪೂರ್ವ ಕಾಲೇಜು, ಕಾರಿಗನೂರು, ಚನ್ನಗಿರಿ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧಿಕೃತ ವೆಬ್‌ಸೈಟ್ http://kreis.karnataka.gov.in ಮೂಲಕ ಅರ್ಜಿ ಪಡೆಯಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.