ವಿಕಲಚೇತನರಿಗೆ ವೈಯಕ್ತಿಕ ಸೌಲಭ್ಯ ಪಡೆಯಲು ಅರ್ಜಿ
ದಾವಣಗೆರೆ: ದೈಹಿಕ ವಿಕಲಚೇತನರ ನಗರೋತ್ಥಾನ ಯೋಜನೆಯ 5% ಯೋಜನೆಯ ವೈಯಕ್ತಿಕ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ 2022-23ನೇ ಸಾಲಿನ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯ (ಹಂತ-4) ಶೇ 5% ಯೋಜನೆಯಡಿಯಲ್ಲಿ ಉದ್ಯೋಗದಲ್ಲಿರುವ ಹಾಗೂ ವ್ಯಾಸಂಗ ಮಾಡುತ್ತಿರುವ ದೈಹಿಕ ವಿಕಲಚೇತರಿಗೆ ತ್ರಿಚಕ್ರವಾಹನ ನೀಡುವುದು ಹಾಗೂ ಇತರೆ ಸಾಧನ ಸಲಕರಣೆಗಳಿಗೆ ನೆರವು ನೀಡಲಾಗುವುದು. ಅರ್ಜಿದಾರರು ನಿಗದಿತ ಅರ್ಜಿ ನಮೂನೆಯನ್ನು ನ್ಯಾಮತಿ ಪಟ್ಟಣ ಪಂಚಾಯಿತಿ ಕಾರ್ಯಾಲಯದಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಜ.30 ರೊಳಗಾಗಿ ಕಚೇರಿ ಸಲ್ಲಿಸಬೇಕೆಂದು ಪಟ್ಟಣ ಪಂಚಾಯಿತಿಯ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.