ದಾವಣಗೆರೆ ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಓಂಬುಡ್ಸ್ ಮನ್ ಹುದ್ದೆಗೆ ಅರ್ಜಿ ಆಹ್ವಾನ!

ದಾವಣಗೆರೆ: ಮಹಾತ್ಮಗಾಂಧಿ ರಾಷ್ಟಿಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅನುಷ್ಠಾನ ಸಂಬ0ಧ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದು ಕೊರತೆಗಳ ನಿವಾರಣೆಗಾಗಿ ರಾಜ್ಯದ 9 ಜಿಲ್ಲೆಗಳಲ್ಲಿ ಖಾಲಿ ಇರುವ ಮತ್ತು ಮುಂದಿನ ದಿನಗಳಲ್ಲಿ ಖಾಲಿಯಾಗಲಿರುವ ಓಂಬುಡ್ಸ್ ಮನ್ ಹುದ್ದೆಗಳ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಬೆಂಗಳೂರು ನಗರ, ದಾವಣಗೆರೆ, ದಕ್ಷಿಣ ಕನ್ನಡ, ಕಲಬುರಗಿ, ಕೊಡಗು, ಮೈಸೂರು, ಉತ್ತರ ಕನ್ನಡ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಓಂಬುಡ್ಸ್ ಮನ್ ಹುದ್ದೆಗಳು ಖಾಲಿ ಇವೆ. ಜಿಲ್ಲಾ ಮಟ್ಟದಲ್ಲಿ ಓಂಬುಡ್ಸ್ ಮನ್‌ಗಳಾಗಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ವ್ಯಕ್ತಿಗಳು ಇಲಾಖೆಯ ವೆಬ್‌ಸೈಟ್ www.rdpr.karnataka.in ನಲ್ಲಿ ನಿಗಧಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಪೂರಕ ದಾಖಲೆಗಳೊಂದಿಗೆ ಅಂಚೆ ಮೂಲಕ ಜುಲೈ 9ರ 2022ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಳಾಸ:
ಅರ್ಜಿಯನ್ನು ಆಯುಕ್ತರು, ಗ್ರಾಮೀಣಾಭಿವೃದ್ದಿ ಆಯುಕ್ತಾಲಯ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್ ನಂ.1243 ಕೆ.ಎಸ್.ಐ.ಐ.ಡಿ.ಸಿ. ಕಟ್ಟಡ, ಐಟಿ ಪಾರ್ಕ್, ಸೌತ್ ಬ್ಲಾಕ್, ರಾಜಾಜಿನಗರ ಇಂಡಸ್ಟಿಯಲ್ ಎಸ್ಟೇಟ್, ಬೆಂಗಳೂರು -560044 ಈ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯುಕ್ತಾಲಯದ ಓಂಬುಡ್ಸ್ ಮನ್ ಶಾಖೆಯ ದೂರವಾಣಿ ಸಂಖ್ಯೆ:080-22342163 ಸಂಪರ್ಕಿಸಬಹುದು.

ಓಂಬುಡ್ಸ್ ಮನ್  ನೇಮಕಾತಿಗೆ ಅರ್ಹತೆಗಳೇನು?:
•  ಸಾರ್ವಜನಿಕ ಆಡಳಿತ, ಕಾನೂನು, ಶೈಕ್ಷಣಿಕ ಕ್ಷೇತ್ರ, ಸಮಾಜ ಸೇವೆ/ ಮ್ಯಾನೇಜ್‌ಮೆಂಟ್ ಕ್ಷೇತ್ರಗಳ ಪೈಕಿ ಯಾವುದಾದರು ಒಂದು ಕ್ಷೇತ್ರಗಳಲ್ಲಿ 10 ವರ್ಷಗಳ       ಸೇವಾನುಭವ ಹೊಂದಿರಬೇಕು.
ಸಾರ್ವಜನಿಕರೊ0ದಿಗೆ, ಸಮುದಾಯದ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ ಕಡ್ಡಾಯ
ಅರ್ಜಿ ಸಲ್ಲಿಸುವವರು ಯಾವುದೇ ರಾಜಕೀಯ ಪಕ್ಷದ ಮತ್ತು ನಿಷೇಧಿತ ಸಂಘ ಸಂಸ್ಥೆಯ ಸದಸ್ಯರಾಗಿರಬಾರದು. ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರಬಾರದು. ಸರ್ಕಾರಿ ನೌಕರರಾಗಿದ್ದಲ್ಲಿ ಇಲಾಖಾ ವಿಚಾರಣೆ ಬಾಕಿ ಇರಬಾರದು/ದಂಡನೆಗೆ ಒಳಪಟ್ಟಿರಬಾರದು.
ತಪಾಸಣೆ, ಕ್ಷೇತ್ರ ಭೇಟಿ ಹಾಗೂ ವೀಕ್ಷಣೆ ಕೆಲಸಗಳಿಗೆ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಳ್ಳಲು ದೈಹಿಕವಾಗಿ ಸಮರ್ಥರಾಗಿರಬೇಕು.
ಅರ್ಜಿ ಸಲ್ಲಿಸಲು ನಿಘಧಿಪಡಿಸಿರುವ ಕೊನೆಯ ದಿನಾಂಕಕ್ಕೆ ಗರಿಷ್ಠ ವಯಸ್ಸು 66 ವರ್ಷಗಳನ್ನು ಮೀರಿರಬಾರದು.
ಕೇಂದ್ರ/ರಾಜ್ಯ ಸರ್ಕಾರವು ಹೊರಡಿಸುವ ಆದೇಶಗಳ ಅನುಸಾರ ಸಂಭಾವನೆ, ಸಿಟ್ಟಿಂಗ್ ಫೀಜು ನೀಡಲಾಗುವುದು. ಪ್ರಸ್ತುತ ಮಾಸಿಕ ರೂ.10 ಸಾವಿರ ಗೌರವಧನ ಹಾಗೂ ಪ್ರತಿ ಸಿಟ್ಟಿಂಗ್‌ಗೆ ರೂ.2250 ರಂತೆ ಗರಿಷ್ಟ ರೂ.45 ಸಾವಿರ ಮಿತಿಗೊಳಪ್ಟು÷್ಟ ಸಿಟ್ಟಿಂಗ್ ಫೀಜು ನೀಡಲಾಗುವುದು.

garudavoice21@gmail.com 9740365719

Leave a Reply

Your email address will not be published. Required fields are marked *

error: Content is protected !!