Bcwd hostel: ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರು ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗದ ವಿದ್ಯಾರ್ಥಿಗಳಿಂದ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ-1, ಪ.ಜಾತಿ/ಪ.ವರ್ಗ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ 2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವರ್ಗದ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ 01 ಲಕ್ಷದ ಮಿತಿಯಲ್ಲಿರುವವರು www.bcwd.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.
ತಾಲ್ಲೂಕುವಾರು ವಿದ್ಯಾರ್ಥಿನಿಲಥಿಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರಗಳಿಗಾಗಿ ಇಲಾಖೆಯ ವೆಬ್ಸೈಟ್ www.bcwd.karnataka.gov.in ಅನ್ನು ನೋಡಬಹುದು.
ಅರ್ಜಿ ಸಲ್ಲಿಸಲು ಅ.11 ಕೊನೆಯ ದಿನವಾಗಿದ್ದು, ಅ.13 ರೊಳಗಾಗಿ ವಿದ್ಯಾರ್ಥಿಯು ವ್ಯಾಸಂಗ ಮಾಡಿತ್ತಿರುವ ಶಾಲೆಯ ಮುಖೋ ಪಾಧ್ಯಯರಿಂದ ದೃಡೀಕರಿಸಿ, ದಾಖಲೆಗಳನ್ನು ಸಂಬಂಧಪಟ್ಟ ತಾಲ್ಲೂಕು ಹಿಂದುಳಿದ ವರ್ಗಗಳ ಕಛೇರಿಗೆ ಸಲ್ಲಿಸಬೇಕು. ಅ.16 ರಿಂದ 19ರ ವರಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಸಮಿತಿಯು ಸಭೆ ನಡೆಸಿ, ಅ.19 ರಂದು ಆಯ್ಕೆ ಪಟ್ಟಿ ಪ್ರಕಟಿಸಲಿದೆ. ಆಯ್ಕೆಯಾದ ವಿದ್ಯಾರ್ಥಿಗಳು ಅ19 ರಿಂದ ಅ25 ರ ಒಳಗಾಗಿ ವಿದ್ಯಾಥಿನಿಲಯಗಳಿಗೆ ಪ್ರವೇಶ ಪಡೆದುಕೊಳ್ಳಬೇಕು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಗೆ ಇ-ಮೇಲ್ ಮುಖಾಂತರ ಅಥವಾ ತಾಲ್ಲೂಕು ಕಲ್ಯಾಣಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ತಿಳಿಸಿದೆ.