ಫಿಲೋಶಿಪ್‍ಗಾಗಿ ಪಿ.ಹೆಚ್.ಡಿ ಅಧ್ಯಯನ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ
ದಾವಣಗೆರೆ:ಡಿ.31 (ಕರ್ನಾಟಕ ವಾರ್ತೆ)- ಪ್ರಸಕ್ತ 2022-23ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಫ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ-1, 2(ಎ), (3ಎ), ಹಾಗೂ 3(ಬಿ) ವರ್ಗದ ಅಭ್ಯರ್ಥಿಗಳು ಪ್ರಥಮ ವರ್ಷದ ಪಿಎಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅಗತ್ಯ ದಾಖಲೆಯೊಂದಿಗೆ ದಿ:13.01.2023ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಮತ್ತು ದೂರವಾಣಿ ಸಂಖ್ಯೆ: 08192-262973 ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.