ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

apply-for-rural-rehabilitation-worker-post-at-nyamathi-davanagere
ದಾವಣಗೆರೆ: ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಕುಂಕುವ ಗ್ರಾಮಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿಆರ್‌ಡಬ್ಲ್ಯೂ) ಹುದ್ದೆಗೆ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಮಾಡಲು ಡಿಸೆಂಬರ್ 26 ಕೊನೆಯ ದಿನ.
ಅಭ್ಯರ್ಥಿಗಳನ್ನು ಮಾಸಿಕ ರೂ. 9,000 ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳಿಗೆ 18 ರಿಂದ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಮಾಡಿದವರಲ್ಲಿ ಕುಂಕುವ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ್ 26 ಕೊನೆಯ ದಿನವಾಗಿರುತ್ತದೆ ಎಂದು ಪ್ರಕಟಣೆ ಹೇಳಿದೆ.
ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ಕಛೇರಿ ದೂರವಾಣಿ ಸಂಖ್ಯೆ 08192 263939 ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಹೊನ್ನಾಳಿ ಇವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 9886366809.
ಮಸಾಜಿಸ್ಟ್ ತರಬೇತಿಗೆ ಅರ್ಜಿ ಆಹ್ವಾನ; ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆ ಶಿವಮೊಗ್ಗ ಇಲ್ಲಿ 2023-24 ನೇ ಸಾಲಿನಲ್ಲಿ ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಕ, ಯುವತಿಯರಿಗೆ ಎರಡು ತಿಂಗಳುಗಳ ಮಸಾಜಿಸ್ಟ್ ತರಬೇತಿ ಕೋರ್ಸ್‍ಗೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಕೆ ಮಾಡಲು ಡಿಸೆಂಬರ್ 18 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆ ಮಾಡುವವರು ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. ವಯೋಮಿತಿ 18 ರಿಂದ 35 ವರ್ಷಗಳು. ಪರಿಶಿಷ್ಟ ಜಾತಿ 20 ಮತ್ತು ಪರಿಶಿಷ್ಟ ಪಂಗಡದ 20 ಫಲಾನುಭವಿಗಳಿಗೆ ಭಾಗವಹಿಸಲು ಅವಕಾಶವಿರುತ್ತದೆ.
ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಎರಡು ತಿಂಗಳ ಕಾಲ ರೂ. 5000 ಶಿಷ್ಯ ವೇತನವನ್ನು ನೀಡಲಾಗುವುದು. ಹೆಚ್ಚಿನ ವಿವರಗಳಿಗೆ ಪ್ರಾಚಾರ್ಯರು ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆ ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 08182-223230. ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ; ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತನ್ನ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ತಜ್ಞ ವೈದ್ಯರ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಕರೆದಿದೆ. ಈ
ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂಬಿಬಿಎಸ್ ಪದವೀಧರ ಮತ್ತು ತಜ್ಞ ವೈದ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪ್ರತಿದಿನ ಕಚೇರಿ ಸಮಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ ಇಲ್ಲಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಹಾಗೂ ಇತ್ತೀಚಿನ ಒಂದು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ 08182-222382 ಸಂಖ್ಯೆಗೆ ಕರೆ ಮಾಡಬಹುದು.