ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ದಾವಣಗೆರೆ : 2022-23 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ, ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಖಾಲಿ ಸ್ಥಾನಗಳಗೆ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ರಾಜ್ಯ ಹಾಸ್ಟೆಲ್ ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ದಾವಣಗೆರೆ ತಾಲ್ಲೂಕಿನ ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ವಿವರ!
ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಆಲೂರುಹಟ್ಟಿ, ರಾಂಪುರ, ಅರಸಾಪುರ, ಆನಗೂಡು, ಮಾಯಕೊಂಡ, ಸರಸ್ವತಿ ನಗರ ಹಾಗೂ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಎಂ.ಸಿ.ಸಿ ಬಿ ಬ್ಲಾಕ್‌ನಲ್ಲಿರುವ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ರಾಜ್ಯ ಹಾಸ್ಟೆಲ್ ಪೊರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿ ನಂತರ ಅರ್ಜಿಯೊಂದಿಗೆ ಆರ್.ಡಿ ನಂಬರ್ ಇರುವ ಜಾತಿ/ಆದಾಯ ಪ್ರಮಾಣಪತ್ರದ ಜೆರಾಕ್ಸ್ ಪ್ರತಿ ಹಾಗೂ ಹಿಂದಿನ ತರಗತಿಯಲ್ಲಿ ಪಾಸಾದ ಅಂಕಪಟ್ಟಿಯ ಪ್ರತಿಯೊಂದಿಗೆ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಇವರಿಗೆ ಜೂನ್.20 ರ ಸಂಜೆ 5.00 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-231413 ವೆಬ್‌ಸೈಟ್ ವಿಳಾಸ :sತಿ.ಞಚಿಡಿ.ಟಿiಛಿ.iಟಿ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣಾ ಇಲಾಖೆಯ ಸಹಾಯಕ ನಿರ್ದೇಶಕರು(ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
garudavoice21@gmail.com 9740365719