ಅಪ್ರಾಪ್ತೆ ಅತ್ಯಾಚಾರ, ಹತ್ಯೆಗೆ ಉಪ್ಪಾರ ಸಮಾಜ ಖಂಡನೆ

ದಾವಣಗೆರೆ: ಚಿತ್ರದುರ್ಗ ಜಿಲ್ಲೆಯ ಇಸಾಮುದ್ರ ಗ್ರಾಮದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಮಹಾಂತೇಶ್ ಅಭಿಮಾನಿಗಳ ಬಳಗ, ಹಂಸ ಟಿವಿ ಕನ್ನಡ ಹಾಗೂ ಹಂಸವಾಣಿ ಕನ್ನಡ ವಾರಪತ್ರಿಕೆ ಮತ್ತು ಉಪ್ಪಾರ ಸಮಾಜ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಲಾಯಿತು.
ಬಾಲಕಿಯು ಬಯಲು ಶೌಚಾಲಯಕ್ಕೆ ಹೋಗಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಅತ್ಯಾಚಾರ ನಡೆಸಿ ಆಕೆಯನ್ನು ಹತ್ಯೆ ಮಾಡಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಬಾಲಕಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಅವರ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಒತ್ತಾಯ.