ಕರ್ನಾಟಕ ಅಲೆಮಾರಿ, ಅರೆಅಲೆಮಾರಿ ಅಭಿವೃದ್ದಿ ನಿಗಮದ ಕಾರ್ಯಕ್ರಮಗಳಿಗೆ ಅನುಮೋದನೆ ನೀಡಿ ಆದೇಶ!

ದಾವಣಗೆರೆ : 2022-23ನೇ ಸಾಲಿನಲ್ಲಿ ಕರ್ನಾಟಕ ಅಲೆಮಾರಿ, ಅರೆಅಲೆಮಾರಿ ಅಭಿವೃದ್ದಿ ನಿಗಮದಡಿಯ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಕ್ರಿಯಾಯೋಜನೆಗೆ ಅನುಮೋದನೆ ನೀಡಿ ಆದೇಶಿಸಿದೆ.

ಕರ್ನಾಟಕ ಅಲೆಮಾರಿ, ಅರೆಅಲೆಮಾರಿ ಅಭಿವೃದ್ದಿ ನಿಗಮ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ವಿವಿಧ ಕಾರ್ಯಕ್ರಮಗಳನ್ನು 2022-23ನೇ ಸಾಲಿನಲ್ಲಿ ಮುಂದುವರೆಸುವ ಉದ್ದೇಶದಿಂದ ಹಲವು ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸರ್ಕಾರದ ಅಧೀನ ಕಾರ್ಯದರ್ಶಿ-2 ಷಾಹೀನ್ ಪರ್ವಿನ್. ಕೆ. ಜೂನ್ 7ರ 2022ರಂದು ಆದೇಶ ಹೊರಡಿಸಿದ್ದಾರೆ.

ಸದರಿ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸಲಾಗುತ್ತಿರುವ ಕಾರ್ಯಕ್ರಮಗಳಿಗೆ 2022-23ನೇ ಸಾಲಿನ ಆಯವ್ಯಯದಲ್ಲಿ ರೂ.600 ಲಕ್ಷಗಳ ಅನುದಾನವನ್ನು ಹಂಚಿಕೆ ಮಾಡಲಾಗಿರುತ್ತದೆ. 2021-22ನೇ ಸಾಲಿನಲ್ಲಿ ಉಳಿಕೆಯಾದ ರೂ.202.08 ಲಕ್ಷಗಳ ಅನುದಾನ ಸೇರಿ ಒಟ್ಟು ರೂ. 802.08 ಲಕ್ಷಗಳ ಅನುದಾನದಲ್ಲಿ 2022-23ನೇ ಸಾಲಿನಲ್ಲಿ ಕ್ರಿಯಾಯೋಜನೆಯನ್ನು ರೂಪಿಸಿದೆ.

ಕರ್ನಾಟಕ ಅಲೆಮಾರಿ, ಅರೆಅಲೆಮಾರಿ ಅಭಿವೃದ್ದಿ ನಿಗಮದಡಿಯ ಕಾರ್ಯಕ್ರಮಗಳು!
ಕರ್ನಾಟಕ ಅಲೆಮಾರಿ, ಅರೆಅಲೆಮಾರಿ ಅಭಿವೃದ್ದಿ ನಿಗಮದಡಿಯಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸತು), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ಸ್ವಾತಂತ್ರ ಅಮೃತ ಮಹೋತ್ಸವದ ಮುನ್ನಡೆ ಹಾಗೂ ಆಡಳಿತಾತ್ಮಕ ವೆಚ್ಚ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ.

ಈ ಎಲ್ಲಾ ಕಾರ್ಯಕ್ರಮಗಳು ಸೇರಿ ಒಟ್ಟು 1048 ಲಕ್ಷ ಭೌತಿಕ ಗುರಿ ಮತ್ತು 802.08 ಆರ್ಥಿಕ ಗುರಿ ಹೊಂದಲಾಗಿದೆ. ಸ್ವಯಂ ಉದ್ಯೋಗ ಸಾಲ ಯೋಜನೆಗೆ 638 ಲಕ್ಷ ಭೌತಿಕ, 313.08 ಲಕ್ಷ ಆರ್ಥಿಕ ಗುರಿ, ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ 96 ಭೌತಿಕ, 260.00 ಆರ್ಥಿಕ, ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು) 29 ಭೌತಿಕ, 28.00 ಆರ್ಥಿಕ, ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ) ಭೌತಿಕ 35 ಲಕ್ಷ, 25.00 ಲಕ್ಷ ಆರ್ಥಿಕ ಗುರಿ, ಸ್ವಾತಂತ್ರ ಅಮೃತ ಮಹೋತ್ಸವದ ಮುನ್ನಡೆಗೆ 250 ಭೌತಿಕ, 50.00 ಲಕ್ಷಗಳ ಆರ್ಥಿಕ ಮತ್ತು ಕೊನೆಯದಾಗಿ ಆಡಳಿತಾತ್ಮಕ ವೆಚ್ಚಕ್ಕಾಗಿ 125.00 ಲಕ್ಷಗಳ ಆರ್ಥಿಕ ಗುರಿಯನ್ನು ಹೊಂದಲಾಗಿದೆ.

 

garudavoice21@gmail.com 9740365719

Leave a Reply

Your email address will not be published. Required fields are marked *

error: Content is protected !!