ಅರಕೆರೆ ಗ್ರಾಮಪಂಚಾಯಿತಿ ನೂತನ ಕಟ್ಟದ, ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ: ಡಿಜಿಟಲ್ ಲೈಬ್ರರಿ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಕೆ.ಎಸ್.ಈಶ್ವರಪ್ಪ

VideoCapture_20220207-123413

ದಾವಣಗೆರೆ,ಫೆ.07: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಸೋಮವಾರ ಬೆಳಿಗ್ಗೆ ಹೊನ್ನಾಳಿ ತಾಲ್ಲೂಕಿನ ಅರಕೆರೆ ಗ್ರಾಮದ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಮತ್ತು ಘನತ್ಯಾಜ್ಯ ವಿಲೇವಾರಿ ಘಟಕ, ಸೋಲಾರ್ ಪ್ಯಾನೆಲ್‌ನ್ನು ಉದ್ಘಾಟಿಸಿ ಡಿಜಿಟಲ್ ಲೈಬ್ರರಿ ಶಂಕುಸ್ಥಾಪನೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮಾಜಿ ಜಿಲ್ಲಾ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರು, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ್, ತಹಶೀಲ್ದಾರ್, ಹೊನ್ನಾಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿಗಳು ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!