ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ:456 ಗ್ರಾಂ ಗಾಂಜಾ ವಶ

ದಾವಣಗೆರೆ : ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯೊಬ್ಬನನ್ನು ಸಿಇಎನ್ ಅಪರಾದ ಪೊಲೀಸರು ದಸ್ತಗಿರಿ ಮಾಡಿ ಬಂಧಿಸಿದ್ದಾರೆ. ದಾವಣಗೆರೆ ತಾಲ್ಲೂಕಿನ ಕುರ್ಕಿ ಗ್ರಾಮದ ವೆಂಕಟೇಶ್ವರ ಕ್ಯಾಂಪ್‌ನಲ್ಲಿ ವ್ಯಕ್ತಿಯೊಬ್ಬ ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ಬಿ.ಎಸ್. ಬಸವರಾಜ ಪೊಲೀಸ್ ಉಪಾಧೀಕ್ಷಕರು, ಡಿಆರ್‌ಬಿ ಘಟಕ, ದಾವಣಗೆರೆ ರವರ ಮಾರ್ಗದರ್ಶನದಲ್ಲಿ ಸಿಇಎನ್ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರಾದ ಮಂಜುನಾಥ ಬಿ., ಹಾಗೂ ಸಿಬ್ಬಂದಿಯವರಾದ ಮಲ್ಲಿಕಾರ್ಜುನ, ದ್ಯಾಮೇಶ್, ಕೊಟ್ರೇಶ್, ನಾಗರಾಜ್ ರವರು ಒಳಗೊಂಡ ತಂಡ ದಾಳಿ ನಡೆಸಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಒಬ್ಬ ಆರೋಪಿತನನ್ನು ದಸ್ತಗಿರಿ ಮಾಡಲಾಗಿದ್ದು ಆತನಿಂದ 456 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ದಾವಣಗೆರೆ ಸಿಇಎನ್ ಅಪರಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Leave a Reply

Your email address will not be published. Required fields are marked *

error: Content is protected !!