ಮಂಗಳೂರು : ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ : ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ

ಮಂಗಳೂರು : ಮನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ನಗರದ ಕೋಟೆಕಾರ್ ಬೀರಿ ಎಂಬಲ್ಲಿ ನಡೆದಿದೆ.

ಬಂಧಿತರನ್ನು ಮೊಹಮ್ಮದ್ ಇಶಾನ್ (35), ಜಾಫರ್ ಸಾಧಿಕ್ (35) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಮಾದಕ ವಸ್ತುವನ್ನು ಖರೀದಿಸಿ ತಂದು ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಿ ಹಣ ಸಂಪಾದನೆ ಮಾಡಲು ಪ್ರಯತ್ನಿಸುತ್ತಿದ್ದರು. ಆರೋಪಿಗಳಿಂದ 9,00,000/- ರೂ ಮೌಲ್ಯದ 407 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಗಳು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ16,13,800/- ರೂ. ಎಂದು ಅಂದಾಜಿಸಲಾಗಿದೆ.

ಆರೋಪಿಗಳಲ್ಲಿ ಜಾಫರ್ ಸಾದಿಕ್ ಎಂಬಾತನ ಮೇಲೆ ಈ ಹಿಂದೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ, ಹಲ್ಲೆ ಹಾಗೂ ಕೊಲೆಯತ್ನ ಹಾಗೂ ಕೊಡಗು ಜಿಲ್ಲೆಯ ಕುಶಾಲ ನಗರ ಠಾಣೆಯಲ್ಲಿ ದರೋಡೆ ಪ್ರಕರಣಗಳು ಸೇರಿದಂತೆ ಒಟ್ಟು 09 ಪ್ರಕರಣಗಳು ದಾಖಲಾಗಿರುತ್ತವೆ. ಮೊಹಮ್ಮದ್ ಇಶಾನ್ ಎಂಬಾತನ ಮೇಲೆ ಈ ಹಿಂದೆ ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆಯಲ್ಲಿ MDMA ಮಾರಾಟ ಪ್ರಕರಣ ದಾಖಲಾಗಿರುತ್ತದೆ.

Leave a Reply

Your email address will not be published. Required fields are marked *

error: Content is protected !!