50 ದಿನಗಳ ನಂತರ ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಅರವಿಂದ್ ಕೇಜ್ರಿವಾಲ್: ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ;
50 ದಿನಗಳ ನಂತರ ಮಧ್ಯಂತರ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರ ಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಪತ್ನಿ ಸುನಿತಾ ಕೇಜ್ರಿವಾಲ್ ಮತ್ತು ಎಎಪಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದ್ದಾರೆ. ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2ರಂದು ಯಾವುದೇ ಪರಿಸ್ಥಿತಿಯಲ್ಲಿ ಶರಣಾಗುವಂತೆ ಅವರಿಗೆ ತಿಳಿಸಲಾಗಿದೆ.
ಬಿಡುಗಡೆಯಾದ ನಂತರ ಮಾತನಾಡಿದ ಕೇಜ್ರಿವಾಲ್, ‘ನಾವೆಲ್ಲರೂ ಒಗ್ಗೂಡಿ ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕೆಂದು ನಿಮ್ಮಲ್ಲಿ ವಿನಂತಿಸುತ್ತೇನೆ. ನಾನು ನನ್ನ ದೇಹ, ಮನಸ್ಸು ಮತ್ತು ಹಣದೊಂದಿಗೆ ಹೋರಾಡುತ್ತಿದ್ದೇನೆ. ಸರ್ವಾಧಿಕಾರದ ವಿರುದ್ಧ ಹೋರಾಟ. ಇಂದು ನಿಮ್ಮ ನಡುವೆ ಇರುವುದು ಒಳ್ಳೆಯದೆನಿಸುತ್ತಿದೆ ಎಂದರು. ಇಂದು ಬೆಳಗ್ಗೆ ಹನುಮನ ಆಶೀರ್ವಾದ ಪಡೆದು ಮಧ್ಯಾಹ್ನ 1 ಗಂಟೆಗೆ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಜೂನ್ 1 ರವರೆಗೆ ಸುಪ್ರೀಂ ಕೋರ್ಟ್ ನಿನ್ನೆ ಮಧ್ಯಂತರ ಜಾಮೀನು ಮಂಜೂರು ಮಾಡಿ, ಸಂಜೆ ಅರವಿಂದ್ ಕೇಜ್ರಿವಾಲ್ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.