ಸುತ್ತೋಲೆಯಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಟ್ಟಿಗೆ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ್ಕೆ 10 ದಿನದ ಮುಂಚಿನವರೆಗೂ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ದಾವಣಗೆರೆ: ಮತದಾರರ ಪಟ್ಟಿಯಲ್ಲಿ ಈವರೆಗೆ ನೋಂದಣಿಯಾಗದ ಹಾಗೂ ದಿ:01.01.2024ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವ ಮತದಾರರು ತಮ್ಮ ಹೆಸರನ್ನು ನೊಂದಾಯಿಸಲು ನಿರ್ದಿಷ್ಟ ಪಡಿಸಿದ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು.
ಮತದಾರರ ಹೆಸರು ನೋಂದಾಯಿಸಲು ತೆಗೆದುಹಾಕಲು ತಿದ್ದುಪಡಿ ಮಾಡಲು ಹಾಗೂ ಸ್ಥಳಾಂತರಕ್ಕಾಗಿ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸಲ್ಲಿಸಬಹುದು.
ಮೇಲ್ಕಂಡಂತೆ ಅರ್ಜಿಗಳನ್ನು ಆನ್‍ಲೈನ್ ಮುಖಾಂತರ Voter Helpline app (VHA)
http://voterportal.eci.gov.in or http://www.nvsp.in ಸಲ್ಲಿಸಬಹುದು. ವಿದೇಶಗಳಲ್ಲಿ ಉದ್ಯೋಗ/ಶಿಕ್ಷಣದ ನಿಮಿತ್ತ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ನಮೂನೆ 6ಎರಲ್ಲಿ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಬಧಿಸಿದ ಮತದಾರರ ನೋಂದಾಣಾಧಿಕಾರಿಗಳಿಗೆ ಅಂಚೆ/ಆನ್ ಲೈನ್ ಮೂಲಕ ಸಲ್ಲಿಸಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ಒಬ್ಬ ಮತದಾರ ಒಂದು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಮಾತ್ರ ಹೆಸರು ನೋಂದಾಯಿಸಿಕೊಳ್ಳಬೇಕು ಹಾಗೂ ಮತದಾರರ ಪಟ್ಟಿಯಲ್ಲಿ ಈವರೆಗೆ ನೋಂದಣಿ ಯಾಗದ ಹಾಗೂ ದಾರರು ತಮ್ಮ ಹೆಸರನ್ನು ನೋಂದಾಯಿಸಲು ನಿರ್ದಿಷ್ಟಪಡಿಸಿದ ನಮೂನೆಯಲ್ಲಿ (Voter Helpline App)ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮತದಾರರ ಉಚಿತ ಸಹಾಯವಾಣಿ 1950 ಅಥವಾ 08192-272953 ನ್ನು ಸಂಪರ್ಕಿಸಬಹುದೆಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಮಹಾನಗರಪಾಲಿಕೆ ಆಯುಕ್ತರಾದ ವಿಶ್ವನಾಥ ಮುದ್ದಜ್ಜಿ, ಚುನಾವಣಾ ಸಮನ್ವಯ ಅಧಿಕಾರಿ ರೇಷ್ಮಾ ಹಾನಗಲ್ ಇತರರಿದ್ದರು.