ರಾಜ್ಯ ಸುದ್ದಿ

ವಿಧಾನಸಭೆ ಚುನಾವಣೆ: ಮೋದಿ, ಯೋಗಿ, ಬೊಮ್ಮಾಯಿಯಿಂದ ‘ವಿಶೇಷ ಮಹಾಪ್ರಚಾರ ಅಭಿಯಾನ’

ವಿಧಾನಸಭೆ ಚುನಾವಣೆ: ಮೋದಿ, ಯೋಗಿ, ಬೊಮ್ಮಾಯಿಯಿಂದ 'ವಿಶೇಷ ಮಹಾಪ್ರಚಾರ ಅಭಿಯಾನ'

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿಯ ಕೇಂದ್ರ ಮತ್ತು ರಾಜ್ಯ ನಾಯಕರು ಪಕ್ಷದ ಪರವಾಗಿ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಎರಡು ದಿನಗಳ ಕಾಲ “ವಿಶೇಷ ಮಹಾಪ್ರಚಾರ ಅಭಿಯಾನ” ಆರಂಭಿಸಲು ಸಿದ್ಧರಾಗಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ 150 ರಾಜ್ಯ ನಾಯಕರು ಮತ್ತು 98 ಕೇಂದ್ರ ನಾಯಕರು ಪ್ರಧಾನಿ ನರೇಂದ್ರ ಮೋದಿ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೋಮವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪ್ರಚಾರದ ಭಾಗವಾಗಿ, ನಾಯಕರು ರೋಡ್‌ಶೋ, ಸಭೆಗಳು, ಮನೆ-ಮನೆ ಭೇಟಿ ಮತ್ತು ಇತರ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ. ಅವರು ವಿವಿಧ ಸಮುದಾಯಗಳು, ಸರ್ಕಾರದ ಕಲ್ಯಾಣ ಯೋಜನೆಗಳು ಮತ್ತು ಕಾರ್ಯಕ್ರಮಗಳ ಫಲಾನುಭವಿಗಳು ಸೇರಿದಂತೆ ಸ್ಥಳೀಯ ಮುಖಂಡರು ಮತ್ತು ದೇವಸ್ಥಾನಗಳು ಹಾಗೂ ಮಠಗಳಿಗೆ ಭೇಟಿ ನೀಡಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಕಳೆದ ತಿಂಗಳು, ಬಿಜೆಪಿಯು “ಬೂತ್ ವಿಜಯ” ಅಭಿಯಾನವನ್ನು ಆಯೋಜಿಸಿತು, ಇದರಲ್ಲಿ ಪಕ್ಷದ ಕಾರ್ಯಕರ್ತರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೊಳಿಸಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಲಾಗಿತ್ತು. ಇದೀಗ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಮತದಾರರಿಗೆ ಮನವಿ ಮಾಡಲಿದ್ದಾರೆ. ನಾವು 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ ಎಂದು ಕಟೀಲ್ ಹೇಳಿದ್ದಾರೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಲೋನಿಗಳಿಗೂ ಭೇಟಿ ನೀಡಿ ರಾಜ್ಯದಲ್ಲಿ ಬಿಜೆಪಿ ಸರಕಾರದ ಬದಲಾದ ಮೀಸಲಾತಿ ನೀತಿ ಕುರಿತು ಮಾತನಾಡಲಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ನಾಲ್ಕು ದಿನಗಳ ಕಾಲ ಕರಾವಳಿ ಕರ್ನಾಟಕ, ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಅಮಿತ್ ಶಾ ಅವರು 35 ರಿಂದ 40 ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್, ನಿರ್ಮಲಾ ಸೀತಾರಾಮನ್, ಮನ್ಸುಖ್ ಮಾಂಡವ್ಯ ಮತ್ತಿತರರು ಕೂಡ ಪ್ರಚಾರ ನಡೆಸಲಿದ್ದಾರೆ ಎಂದರು.

Click to comment

Leave a Reply

Your email address will not be published. Required fields are marked *

Most Popular

To Top