ಆಗಸ್ಟ್ 14ರಂದು ಬೃಹತ್ ಲೋಕ ಅದಾಲತ್

ದಾವಣಗೆರೆ :ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ದಾವಣಗರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇದೆ ಆಗಸ್ಟ್ 14ರ ಶನಿವಾರದಂದು ಮೆಗಾ ಲೋಕ್ ಅದಾಲತ್ ಆಯೋಜಿಸಲಾಗಿದೆ ,
ಇದೆ ಮಾರ್ಚ್ 27 ರಂದು ನಡೆದ ಬೃಹತ್ ಲೋಕ್ ಅದಾಲತ್ನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ 6041 ಪ್ರಕರಣಗಳು ಇತ್ಯರ್ಥಗೊಂಡು ರೂ . 11,06,80,14 / -ಗಳ ಪರಿಹಾರದ ಮೊತ್ತವಾಗಿರುತ್ತದೆ . ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅದೆಕ್ಷೆ ರಾಜೇಶ್ವರಿ ಎಸ್ ಹೆಗ್ಗಡೆ ತಿಳಿಸಿದರು
ನಗರದ ಜಿಲ್ಲಾ ನ್ಯಾಯಾಲದಲ್ಲಿ ಇಂದು ಪತ್ರಿಕಾಗೋಷ್ಠಿ ಯಲ್ಲಿ ಮಾತಾಡಿದ ಅವರು,ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಗೌ । ನ್ಯಾಯಮೂರ್ತಿ ಶ್ರೀ ಅರವಿಂದ್ ಕುಮಾರ್ ರವರು ಲೋಕ್ ಆದಾಲತ್ ಮೂಲಕ ಆತೀ ಹೆಚ್ಚು ಪ್ರಕರಣಗಳನ್ನು ರಾಜೇ ಸಂಧಾನದ ಮೂಲಕ ಇತ್ಯರ್ಥಗೊಳಿಸಲು ಬಯಸಿರುತ್ತಾರೆ . ಈ ಪ್ರಕಾರವಾಗಿ ಈಗ ಮತ್ತೊಮ್ಮೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಆಗಸ್ಟ್ 14 ರಂದು ಬೃಹತ್ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಿರುತ್ತದೆ .
ಆ ಪ್ರಕಾರವಾಗಿ ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಡಿಯಲ್ಲಿ ಜಿಲ್ಲೆಗಳಲ್ಲಿರುವ ಎಲ್ಲಾ ನ್ಯಾಯಾಲಯಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬೃಹತ್ ಲೋಕ್ ಆದಾಲತ್ನ್ನು ಆಯೋಚಿಸಲಿಲಾಗಿದೆ , ಈ ಬೃಹತ್ ಲೋಕ್ ಅದಾಲತ್ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದರು .
ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು , ಮೊಟರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು , ಚೆಕ್ಆಮಾನ್ಯ ಪ್ರಕರಣಗಳು , ಭೂಸ್ವಾಧೀನ ಪರಿಹಾರ ಪ್ರಕರಣಗಳು , ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು , ಎಂ.ಎಂ.ಡಿ.ಆರ್ , ಕಾಯ್ದೆಯಡಿಯ ಪ್ರಕರಣಗಳನ್ನು ಮೆಗಾ ಲೋಕ್ ಅದಾಲತ್ ನಲ್ಲಿ ಪರಿಹರಿಸಿಕೊಳ್ಳಬಹುದು ಎಂದು ಹೇಳಿದರು .
ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣಗಳು ( ವಿಚ್ಛೇಧನ ಹೊರತುಪಡಿಸಿ ) , ಪಿಂಚಣಿ ಪ್ರಕರಣಗಳು , ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು , ವಿದ್ಯುತ್ ಹಾಗೂ ನೀರಿನ ಶುಲ್ಕ , ಕೈಗಾರಿಕೆ ಕಾರ್ಮಿಕರ ವೇತನ , ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು .
ಈಗಿನ ಕೋವಿಡ್ -19 ಸೋಂಕಿನಿಂದ ಸಾರ್ವಜನಿಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ಆರ್ಥಿಕ ಸಂಕಷ್ಟದಿಂದ ಹೊರಬರಲು ಅವಕಾಶ ಇರುತ್ತದೆ . ಪ್ರಕರಣಗಳು ರಾಜೀಯಾದಲ್ಲಿ ಸಂಪೂರ್ಣ ನ್ಯಾಯಾಲಯಗಳ ಶುಲ್ಕವನ್ನು ಮರುಪಾವತಿ ಮಾಡಲಾಗುವುದು ಎಂದರು,
ಈ ಬಾರಿ ಕಕ್ಷಿಗಾರರು ದೈಹಿಕವಾಗಿ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಪ್ರಕರಣಗಳನ್ನು ಲೋಕ್ ಅದಲಾತ್ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು . ಕಳೆದ ಬಾರಿಯಂತೆ ಈ ಬಾರಿಯೂ ಸಹ ಇದರ ಉಪಯೋಗವನ್ನು ಸಾರ್ವಜನಿಕರು , ಕಕ್ಷಿಗಾರರು ಪಡೆದುಕೊಂಡು ಅತಿ ಹೆಚ್ಚು ಪ್ರಕರಣಗಳನ್ನು ಪರಿಹರಿಸಿಕೊಳ್ಳಬೇಕೆಂದು ವಿನಂತಿಸಿದರು .
ಸಾರ್ವಜನಿಕರು ಮೆಗಾ ಲೋಕ್ ಅದಾಲತ್ನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ , ದಾವಣಗೆರೆ ಇವರ ದೂರವಾಣಿ ಸಂಖ್ಯೆ : 08192-296364 , ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ. ಹರಿಹರ ದೂರವಾಣಿ ಸಂಖ್ಯೆ : 08192-296885 , ಹೊನ್ನಾಳಿ ದೂರವಾಣಿ ಸಂಖ್ಯೆ : 08188-251732 , ಚನ್ನಗಿರಿ ದೂರವಾಣಿ ಸಂಖ್ಯೆ : 08189-229195 ಮತ್ತು ಜಗಳೂರು ದೂರವಾಣಿ ಸಂಖ್ಯೆ : 08196-227600 ಇವರನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ . ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಸಿ ಬಿ ರಿಷಂತ್ ಕಾನೂನು ಸೇವಾ ಪ್ರಾಧಿಕಾರದ ಪದಾಧಿಕಾರಿಗಳು ಹಾಜರಿದ್ದರು
