ಆಗಸ್ಟ್.31 ರಂದು ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿ

ದಾವಣಗೆರೆ : ಕಾಯಕ ಯೋಗಿ ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿಯನ್ನು ಆಗಸ್ಟ್.31 ರಂದು  ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ತಿಳಿಸಿದರು. ಸೋಮವಾರ ಜಿಲ್ಲಾಡಳಿತ ಭವನದ ಅಪರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾಯಾಯಣಗುರು ಜಯಂತಿ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅವರು ಮಾತನಾಡಿದರು.

ಆಗಸ್ಟ್ 31 ರಂದು ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಬೆಳಗ್ಗೆ 11 ರಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಹಾಗೂ ಮಧ್ಯಾಹ್ನ 3 ಗಂಟೆಗೆ ನುಲಿಯ ಚಂದಯ್ಯ ಜಯಂತಿಯನ್ನು  ಆಚರಿಸಲು  ತೀರ್ಮಾನಿಸಲಾಗಿದೆ. ಮಹಾನೀಯರ ವ್ಯಕ್ತಿತ್ವದ ಚಿತ್ರಣವನ್ನು ನೃತ್ಯ, ನಾಟಕ ಹಾಗೂ ಉಪನ್ಯಾಸಗಳ ಮೂಲಕ ಮುಂದಿನ ಪೀಳಿಗೆಗೆ ಉಣಬಡಿಸಬೇಕಾಗಿದೆ, ಎಲ್ಲಾ ಶಾಲೆ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಇಂತಹ ಶರಣರ ಜಯಂತಿಯನ್ನು ಆಚರಿಸಲು ಸುತ್ತೋಲೆ ಹೊರಡಿಸಲಾಗುವುದು, ಶರಣರ ಅನುಭವ ಹಾಗೂ ಅನುಭಾವವನ್ನು ಜಯಂತಿಗಳ ಮೂಲಕ ತಿಳಿಸಬೇಕು ಎಂದರು.

ನುಲಿಯ ಚಂದಯ್ಯನವರು 12 ನೇ ಶತಮಾನದ ವಚನಕಾರರಾಗಿದ್ದು, ಬಸವಣ್ಣನವರ ಸಮಕಾಲೀನರಾಗಿದ್ದಾರೆ, ಕಾಯಕ ಮತ್ತು ದಾಸೋಹದ ಮೂಲಕ ಸಮಾಜಕ್ಕೆ ಬೆಳಕು ನೀಡಿದ್ದಾರೆ. ಸಮಾಜಿಕ ಕ್ರಾಂತಿಯ ಹರಿಕಾರ ನಾರಾಯಣ ಗುರುಗಳ ಸಂದೇಶಗಳನ್ನು ಸಮಾಜಕ್ಕೆ ತಿಳಿಸಬೇಕು ಎಂದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನರದೇಶಕ  ರವಿಚಂದ್ರ, ಬ್ರಹ್ಮಶ್ರೀ ಸಮಾಜದ ಅಧ್ಯಕ್ಷ ಶಂಕರ್ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!