ಲೋಕಲ್ ಸುದ್ದಿ

August15; ಐದು ವರ್ಷಗಳ ನಂತರ ಜಿಲ್ಲೆಯ ಶಾಸಕರೊಬ್ಬರು, ಜಿಲ್ಲಾ ಉಸ್ತುವಾರಿ ಸಚಿವರಾಗಿ ಧ್ವಜಾರೋಹಣ ನಡೆಸುವ ಸುದಿನ – ಕೆ.ಎಲ್.ಹರೀಶ್ ಬಸಾಪುರ.

ಐದು ವರ್ಷಗಳ ನಂತರ ಜಿಲ್ಲೆಯ ಶಾಸಕರೊಬ್ಬರು, ಜಿಲ್ಲಾ ಉಸ್ತುವಾರಿ ಸಚಿವರಾಗಿ ಧ್ವಜಾರೋಹಣ ನಡೆಸುವ ಸುದಿನ - ಕೆ.ಎಲ್.ಹರೀಶ್ ಬಸಾಪುರ.

ದಾವಣಗೆರೆ; August 15 ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ   ಜಿಲ್ಲೆಯ ಶಾಸಕರೊಬ್ಬರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಧ್ವಜಾರೋಹಣ ಮಾಡುವಂತಹ ಸಂದರ್ಭ ಬಂದಿರುವುದು ಸಂತಸದ ವಿಷಯ ಎಂದು ಕಾಂಗ್ರೇಸ್ ಸಾಮಾಜಿಕ ಜಾಲತಾಣದ ಕೆ ಎಲ್ ಹರೀಶ್ ಬಸಾಪುರ ತಿಳಿಸಿದ್ದಾರೆ.

2013 ರಿಂದ 2018 ರವರೆಗೆ ನಮ್ಮ ಜಿಲ್ಲೆಯವರೇ ಆದ ಡಾ. ಶಾಮನೂರು ಶಿವಶಂಕರಪ್ಪನವರು ಹಾಗೂ ಎಸ್.ಎಸ್ ಮಲ್ಲಿಕಾರ್ಜುನ್ ರವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿ ಧ್ವಜಾರೋಹಣ ನೆರವೇರಿಸಿದ್ದರು.  2018 ರಲ್ಲಿ ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದ್ದರೂ ಸಹ, ಜಿಲ್ಲೆಯ ಯಾರನ್ನು ಸಚಿವರನ್ನಾಗಿ ಮಾಡದೇ ಇದ್ದಿದ್ದರಿಂದ ಬೇರೆ ಜಿಲ್ಲೆಯ ಸಚಿವರೇ ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿ ಧ್ವಜಾರೋಹಣ ನೆರವೇರಿಸುತ್ತಿದ್ದರು.

ಬರುವ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ NEP ರದ್ದು ಮಾಡಲಾಗುವುದು – ಸಿಎಂ ಸಿದ್ದರಾಮಯ್ಯ

2023ರಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ದಾವಣಗೆರೆ ಜಿಲ್ಲೆಯ ಶಾಸಕರಾದ ಎಸ್.ಎಸ್. ಮಲ್ಲಿಕಾರ್ಜುನ್ ರವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಧ್ವಜಾರೋಹಣ ನೆರವೇರಿಸುತ್ತಿರುವುದು ಸಂತೋಷದ ವಿಷಯವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ಕೆ.ಎಲ್. ಹರೀಶ್ ಬಸಾಪುರ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Most Popular

To Top