ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಆಟೋ ಟ್ಯಾಕ್ಸಿ ಚಾಲಕರು, ಮಾಲೀಕರ ಭಕ್ತಿಪೂರ್ವಕ ನಮನ

ದಾವಣಗೆರೆ : ನಡೆದಾಡುವ ದೇವರಂದೆ ಹೆಸರಾಗಿದ್ದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ನಗರದಲ್ಲಿ ಇಂದು ಸಂಜೆ ಜೈ ಕರುನಾಡ ವೇದಿಕೆ ಹಾಗೂ ಶ್ರೀಕೃಷ್ಣ ಸಾರಥಿ ಆಟೋ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರ ಸಂಘದಿಂದ ಭಕ್ತಿಪೂರ್ವಕ ನಮನ ಸಲ್ಲಿಸಲಾಯಿತು.
ನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಡಾ. ವಿಷ್ಣುದಾದರವರ ವೃತ್ತದಲ್ಲಿ ಸಿದ್ದೇಶ್ವರ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಮೇಣಬತ್ತಿ ಬೆಳಕು ಮೂಡಿಸುವುದರ ಮುಖಾಂತರ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಜೈ ಕರುನಾಡ ವೇದಿಕೆ ಜಿಲ್ಲಾಧ್ಯಕ್ಷ ಎಚ್. ಪರಶುರಾಮ್ ನಂದಿಗಾವಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಬಾಳೆಕಾಯಿ ಸೇರಿದಂತೆ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಇದ್ದರು.