award; ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ದಾವಣಗೆರೆ, ಆ.19: 2023-24ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ (Hoysala, Keladi Chennamma Award) ಯೋಜನೆಯಡಿ ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳ ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಅರ್ಜಿ (application) ಆಹ್ವಾನಿಸಲಾಗಿದೆ.
ಜಿಲ್ಲಾ ಮಟ್ಟದಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಂಸ್ಕೃತಿ, ಸಂಗೀತ (music) ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಪ್ರತಿಭೆಯ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿರಬೇಕು ಅಥವಾ ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪ್ರಮಾಣೀಕರಿಸಿರಬೇಕು, ಮಕ್ಕಳ (children) ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. 5 ರಿಂದ 18 ವರ್ಷದ ವಯೋಮಾನದವರಾಗಿರಬೇಕು. ಪ್ರತಿಭೆಯುಳ್ಳ ಮಕ್ಕಳಿಗೆ ರೂ.10,000 ನಗದು ಬಹುಮಾನ ಹಾಗೂ ಪ್ರಶಸ್ತಿ ನೀಡಲಾಗುತ್ತದೆ.
application; ಆಡಿಯೋ, ವೀಡಿಯೋ ಎಡಿಟಿಂಗ್ ತರಬೇತಿ
ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಛೇರಿ, ಸರ್ಕಾರಿ ಬಾಲಕರ ಬಾಲ ಮಂದಿರ ಆವರಣ, ಎಂ.ಸಿ.ಸಿ ಬಿ ಬ್ಲಾಕ್, ಕುವೆಂಪು ನಗರ, ದಾವಣಗೆರೆ ಇಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೆ.16ರ ಒಳಗಾಗಿ ಅದೇ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.೦೮೧೯೨-೨೬೪೦೫೬ಗೆ ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.