ಸರ್ಕಾರದ ವಿವಿಧ ಯೋಜನೆಗಳ ಜಾಗೃತಿ ಕಾರ್ಯಕ್ರಮ

ಜಾಗೃತಿ ಕಾರ್ಯಕ್ರಮ
ದಾವಣಗೆರೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ರಾಮ ಸಂಪರ್ಕ ಯೋಜನೆಯಡಿ ಜಿಲ್ಲೆಯ ಆಯ್ದ 20 ಗ್ರಾಮಗಳಲ್ಲಿ ಫೆಬ್ರವರಿ 10 ರವರೆಗೆ ಸರ್ಕಾರದ ವಿವಿಧ ಜನಪರ ಯೋಜನೆಗಳ ಕುರಿತು ಬೀದಿನಾಟಕದ ಮೂಲಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹರಿಹರ ತಾಲೂಕಿನ ಕೆ.ಎನ್ ಹಳ್ಳಿ ಮತ್ತು ಯಲವಟ್ಟಿ ಗ್ರಾಮ ಪಂಚಾಯಿತಿಯಲ್ಲಿ ರೂಪದರ್ಶಿ ಕಲಾತಂಡದಿಂದ ಬೀದಿನಾಟಕ ತಂಡವು ಎಸ್.ಸಿ/ಎಸ್.ಟಿ ಮೀಸಲಾತಿ ಹೆಚ್ಚಳ, ಕಿಸಾನ್ ಸಮ್ಮಾನ್ ಯೋಜನೆ, ಸ್ತ್ರೀ ಶಕ್ತಿ ಮಹಿಳಾ ಸಂಘದ ಮಹಿಳೆಯರಿಗೆ ಇರುವ ಯೋಜನೆಗಳ ಕುರಿತು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಕುರಿತಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು