ಸರ್ಕಾರದ ವಿವಿಧ ಯೋಜನೆಗಳ ಜಾಗೃತಿ ಕಾರ್ಯಕ್ರಮ

ದಾವಣಗೆರೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ರಾಮ ಸಂಪರ್ಕ ಯೋಜನೆಯಡಿ ಜಿಲ್ಲೆಯ ಆಯ್ದ 20 ಗ್ರಾಮಗಳಲ್ಲಿ ಡಿಸೆಂಬರ್ 31ರವರೆಗೆ ಸರ್ಕಾರದ ವಿವಿಧ ಜನಪರ ಯೋಜನೆಗಳ ಕುರಿತು ಬೀದಿನಾಟಕದ ಮೂಲಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹೊನ್ನಾಳಿ ತಾಲೂಕಿನ ಬೆಳಗುತ್ತಿ, ಮತ್ತು ಯರಗನಾಳ್, ಗ್ರಾ.ಪಂ.ಯಲ್ಲಿ ಪಯಣ ಸಾಮಾಜಿಕ ಮತ್ತು ಶೈಕ್ಷಣಿಕ ಬೀದಿನಾಟಕ ತಂಡವು ನೊಂದ ಮನಸ್ಸಿಗೆ ಧೈರ್ಯ ತುಂಬಿ ಗೆಲುವಿನ ಬೀಜ ಬಿತ್ತೋಣ ಎನ್ನುವ ಹಾಡಿನೊಂದಿಗೆ ಸರ್ಕಾರದ ವಿವಿಧ ಯೋಜನೆಗಳ ಕುರಿತಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.