ಆಜಾದಿ ಕಾ ಅಮೃತ್ ಮಹೋತ್ಸವ್ ಸಮ್ಮೇಳನ! ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಉಧ್ಘಾಟನಾ ನುಡಿ
ದಾವಣಗೆರೆ: ಭಾರತದ 75 ವರ್ಷಗಳ ಸ್ವಾತಂತ್ರ್ಯ ಮತ್ತು ಅದರ ಅಭಿವೃದ್ದಿ ಹೊಂದುತ್ತಿರುವ ಬಂಡವಾಳ ಮಾರುಕಟ್ಟೆಗಳ ಸಂಭ್ರಮಾಚರಣೆ ಅಂಗವಾಗಿ ಕೇಂದ್ರ ಸರ್ಕಾರದ ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆ ವತಿಯಿಂದ ಆಯೋಜಿಸಲಾಗಿರುವ “ಮಾರುಕಟ್ಟೆಗಳ ಮೂಲಕ ಸಂಪತ್ತಿನ ಸೃಷ್ಟಿ” ವಿಷಯದ ಕುರಿತು ಕಾರ್ಯಕ್ರಮ ಉಧ್ಘಾಟಕರಾದ ಕೇಂದ್ರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಖಾತೆ ಸಚಿವರಾದ ಶ್ರೀಮತಿ ನಿರ್ಮಲಾ ಸೀತರಾಮನ್ ರವರು ಬೆಂಗಳೂರಿನಿಂದ ವರ್ಚುಯಲ್ ಮೂಲಕ ಉಧ್ಘಾಟನಾ ನುಡಿಗಳನ್ನಾಡಲಿದ್ದಾರೆ. ಕೇಂದ್ರದ ಹಣಕಾಸು ರಾಜ್ಯ ಸಚಿವರಾದ ಡಾ.ಭಾಗವತ್ ಕಿಶನ್ ರಾವ್ ಕರಡ್ ಉಪಸ್ಥಿತರಿರುವರು. ದಾವಣಗೆರೆ ಜಿಲ್ಲಾಧಿಕಾರಿಗಳ ಕಛೇರಿ ತುಂಗಭದ್ರಾ ಸಬಾಂಗಣದಲ್ಲಿ ಕಾರ್ಯಕ್ರಮದ ನೇರಪ್ರಸಾರದ ವರ್ಚುಯಲ್ ಕಾರ್ಯಕ್ರಮವನ್ನು ಜೂನ್, 10 ರ ಮಧ್ಯಾಹ್ನ 3 ಘಂಟೆಗೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮ ದೇಶದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 75 ನಗರಗಳಲ್ಲಿ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.