ಬಿ ವೈ ವಿಜಯೇಂದ್ರಗೆ ಸಚಿವ ಸ್ಥಾನ ವರಿಷ್ಠರು ತಿರ್ಮಾನಿಸುತ್ತಾರೆ.! ಮಂತ್ರಿ ಸ್ಥಾನ ಸಿಗದಿದ್ದರೆ ಕಾರ್ಯಕರ್ತರಾಗಿ ಕೆಲಸ – ಸಂಸದ ಬಿವೈ ರಾಘವೇಂದ್ರ

ದಾವಣಗೆರೆ: ವಿಜಯೇಂದ್ರಗೆ ಸಚಿವ ಸ್ಥಾನ ನೀಡುವ ಕುರಿತು ಸರ್ಕಾರದ ಮಟ್ಟದಲ್ಲಿ ಏನು ಚರ್ಚೆಯಾಗಿದೆ ಎನ್ನುವುದು ಗೊತ್ತಿಲ್ಲ. ರಾಜಕಾರಣದಲ್ಲಿ ಭರವಸೆಯನ್ನು ಇಟ್ಟುಕೊಳ್ಳಬೇಕಾಗುತ್ತದೆ ಎಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ಸಚಿವ ಸ್ಥಾನ ಸಿಗುವುದರ ಬಗ್ಗೆ ರಾಜ್ಯ ನಾಯಕರು ಏನೇ ತೀರ್ಮಾನ ಕೈಗೊಂಡರೂ ಅದಕ್ಕೆ ಅವರು ಬದ್ಧರಾಗಿದ್ದಾರೆ. ಮಂತ್ರಿ ಸ್ಥಾನ ಸಿಗದಿದ್ದರೆ ಕಾರ್ಯಕರ್ತರಾಗಿ ಕೆಲಸ ಮಾಡುತ್ತಾರೆ ಎಂದರು.
ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಈ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಶೇ. ೪೫ಕ್ಕಿಂತ ಹೆಚ್ಚು ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರಿದ್ದಾರೆ. ೨೦ ರಲ್ಲಿ ೧೫ ಕ್ಷೇತ್ರ ಗೆಲ್ಲುತ್ತೇವೆ ಎನ್ನುವ ವಿಶ್ವಾಸ ನಮಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.