ಬಾಬು ಜಗಜೀವನರಾಂ ಹಾಗೂ ಅಂಬೇಡ್ಕರ್ ಪ್ರಶಸ್ತಿ : ಅರ್ಜಿ ಆಹ್ವಾನ 

ದಾವಣಗೆರೆ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿನ ಡಾ. ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಾಗಿ ಪ.ಜಾತಿ/ಪ.ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ವರ್ಷ ಏಪ್ರಿಲ್ 05 ರಂದು ಡಾ|| ಬಾಬು ಜಗಜೀವನರಾಂ ರವರ ಹಾಗೂ ಏಪ್ರಿಲ್ 14ರಂದು ಡಾ|| ಬಿ.ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ವಿಜೃಂಬಣೆಯಿಂದ ಆಚರಿಸ ಲಾಗುತ್ತದೆ. ಅದರಂತೆ 2022-23ನೇ ಸಾಲಿನಲ್ಲೂ ಸಹ ಏ. 05 ರಂದು ಡಾ|| ಬಾಬು ಜಗಜೀವನರಾಂ ರವರ 115ನೇ ಜನ್ಮ ದಿನಾಚರಣೆ ಮತ್ತು ಏ. 14 ರಂದು ಡಾ|| ಬಿ.ಆರ್.ಅಂಬೇಡ್ಕರ್ ರವರ 131ನೇ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಪ.ಜಾತಿ/ಪ.ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ 2022-23ನೇ ಸಾಲಿನ ಡಾ|| ಬಾಬು ಜಗಜೀವನರಾಂ ಹಾಗೂ ಡಾ|| ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿದ್ದು, ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಒಬ್ಬ ವ್ಯಕ್ತಿ ಒಂದು ಪ್ರಶಸ್ತಿಗೆ ಮಾತ್ರ ಅರ್ಜಿ ಸಲ್ಲಿಸಬೇಕು, ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 35 ವರ್ಷವಾಗಿರಬೇಕು. ಯಾವುದೇ ಜನಾಂಗದ ವ್ಯಕ್ತಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರಬಾರದು. ಒಂದು ಪ್ರಶಸ್ತಿಗೆ ಒಬ್ಬ ವ್ಯಕ್ತಿಯಂತೆ ಶಿಫಾರಸ್ಸು ಮಾಡಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ಪ್ರಶಸ್ತಿಯನ್ನು ಡಾ|| ಬಾಬು ಜಗಜೀವನರಾಂ ಹಾಗೂ ಡಾ|| ಬಿ.ಆರ್.ಅಂಬೇಡ್ಕರ್ ರವರ ಜಯಂತಿ ದಿನದಂದು ಪ್ರದಾನ ಮಾಡಲಾಗುವುದು. ಆಸಕ್ತರು ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ರೂಂ ನಂ-37, ಜಿಲ್ಲಾಡಳಿತ ಭವನ, ಕರೂರು ಇಂಡಸ್ಟ್ರೀಯಲ್ ಏರಿಯಾ, ದಾವಣಗೆರೆ ಇಲ್ಲಿಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಮಾ. 21 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-231782 ಕ್ಕೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!