ಬಾಗಲಕೋಟೆ : ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆ : ಜಿಲ್ಲೆಯಲ್ಲಿ ಕಾರ್ಯನಿವÀðಹಿಸುತ್ತಿರುವ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 54 ಶೀಘ್ರಲಿಪಿಗಾರ, ಆದೇಶ ಜಾರಿಕಾರ, ಜವಾನ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆ  ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 21, 2022 ರಿಂದ ಏಪ್ರಿಲ್ 21,2022ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ ಎಂದು ತಿಳಿಸಲಾಗಿದೆ.

ಹುದ್ದೆಗಳ ವಿವರ :
ಶೀಘ್ರಲಿಪಿಗಾರ – 13 ಹುದ್ದೆಗಳು, ಬೆರಳಚ್ಚುಗಾರರು – 2 ಹುದ್ದೆಗಳು, ಬೆರಳಚ್ಚು ನಕಲುಗಾರರು – 1 ಹುದ್ದೆ, ಆದೇಶ ಜಾರಿಕಾರ – 1 ಹುದ್ದೆ, ಸಿಪಾಯಿ – 37 ಹುದ್ದೆಗಳು ಒಟ್ಟು 54 ಹುದ್ದೆಗಳು,

ವಿದ್ಯಾರ್ಹತೆ : ಶೀಘ್ರಲಿಪಿಗಾರ ಹುದ್ದೆಗಳಿಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಬೆರಳಚ್ಚುಗಾರ ಹುದ್ದೆಗಳಿಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಸ್ಪೆಷಲಿಸ್ಟ್ ಹುದ್ದೆಗಳಿಗೆ ನೇರ ಸಂದರ್ಶನ ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಕಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಆದೇಶ ಜಾರಿಕಾರ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜವಾನ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ :

ಹುದ್ದೆಗಳ ಹೆಸರು – ವೇತನ (ತಿಂಗಳಿಗೆ)
ಶೀಘ್ರಲಿಪಿಗಾರ ರೂ.27,650/- ರಿಂದ 52,650/-ರೂ
ಬೆರಳಚ್ಚುಗಾರ ರೂ.21,400/- ರಿಂದ 42,000/-ರೂ
ಬೆರಳಚ್ಚು ನಕಲುಗಾರ ರೂ.21,400/- ರಿಂದ 42,000/-ರೂ
ಆದೇಶ ಜಾರಿಕಾರ ರೂ.19950/- ರಿಂದ 37900/-ರೂ
ಜವಾನ ರೂ.17000/- ರಿಂದ 28950/-ರೂ

ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2ಎ, ಪ್ರವರ್ಗ- 2ಬಿ, ಪ್ರವರ್ಗ-3ಎ ಮತ್ತು ಪ್ರವರ್ಗ 3ಬಿ ಯ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆಯ ವಿಧಾನ :

ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಕನ್ನಡ /ಇಂಗ್ಲೀಷ್ ಭಾಷೆಗಳಲ್ಲಿ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು. ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ 15 ನಿಮಿಷಗಳ ಅವಧಿಯಂತೆ ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಬೆರಳಚ್ಚು ಮಾಡಲು ಉಕ್ತಲೇಖನ ನೀಡಲಾಗುವುದು. ಆದೇಶ ಜಾರಿಕಾರ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 1:25 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ ಒಟ್ಟು 10 ಅಂಕಗಳನ್ನು ನಿಗಧಿಪಡಿಸಲಾಗಿದೆ. ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಸಂದರ್ಶನಕ್ಕೆ ಕರೆಯಲು ಮಾತ್ರ ಪರಿಗಣಿಸಲಾಗುವುದು. ಸಿಪಾಯಿ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಪಡೆದ ಸರಾಸರಿ ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 1:10 ಅನುಪಾತದಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ ಒಟ್ಟು 10 ಅಂಕಗಳನ್ನು ನಿಗಧಿಪಡಿಸಲಾಗಿದೆ.

ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಪಡೆದ ಅಂಕಗಳನ್ನು ಸಂದರ್ಶನಕ್ಕೆ ಕರೆಯಲು ಮಾತ್ರ ಪರಿಗಣಿಸಲಾಗುವುದು.

ನಿಗದಿತ ಅರ್ಜಿ ಶುಲ್ಕ : ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 300/-ರೂ ಮತ್ತು ಪ್ರವರ್ಗ 2A, 2B, 3A, 3B  ಗೆ ಸೇರಿದ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ ಪಾವತಿಸಬೇಕಾದ ವಿಧಾನ :
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ hಣಣಠಿs://ಜisಣಡಿiಛಿಣs.eಛಿouಡಿಣs.gov.iಟಿ/bಚಿgಚಿಟಞoಣ-oಟಿಟiಟಿeಡಿeಛಿಡಿuiಣmeಟಿಣmeಟಿಣ ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan download ಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.

ಈ ರೀತಿ net banking/credit card/ debit card/challan download ಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಏಪ್ರಿಲ್ 22,2022ರೊಳಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಈ ಮೇಲಿನ ವಿಧಾನಗಳನ್ನು ಹೊರತುಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ನಗದು, ಮನಿ ಆರ್ಡರ್ ಇವುಗಳ ರೂಪದಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ :

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ hಣಣಠಿs://ಜisಣಡಿiಛಿಣs.eಛಿouಡಿಣs.gov.iಟಿ/bಚಿgಚಿಟಞoಣ-oಟಿಟiಟಿeಡಿeಛಿಡಿuiಣmeಟಿಣmeಟಿಣ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 21,202 ರಿಂದ ಏಪ್ರಿಲ್ 21,2022ರ ರಾತ್ರಿ 11:59ರೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

Leave a Reply

Your email address will not be published. Required fields are marked *

error: Content is protected !!