ಬಂಬೂ ಬಜಾರ್ ಬಳಿಯ ಸಿ ಸಿ ಚರಂಡಿ ಕಾಮಗಾರಿ ವೀಕ್ಷಿಸಿದ ದೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್
ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನದಿಂದ ನಡೆಯುತ್ತಿರುವ ಪಾಲಿಕೆ ವ್ಯಾಪ್ತಿಯ ವಾರ್ಡ 19 ರಲ್ಲಿ ಬಂಬುಬಜಾರ ಚೌಡೇಶ್ವರಿ ದೇವಸ್ಥಾನದ ರಸ್ತೆ ಮತ್ತು ಎರಡೂ ಬದಿಯಲ್ಲಿ ಸಿ ಸಿ ಚರಂಡಿ ಕಾಮಗಾರಿಗಳನ್ನು ದೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್ ವೀಕ್ಷಿಸಿ, ಗುಣಮಟ್ಟದ ಕಾಮಗಾರಿ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಸದಸ್ಯರಾದ ಗೌರಮ್ಮ ಪಾಟೀಲ್, ಮಾರುತಿರಾವ್ ಘಾಟ್ಗೆ, ಆರ್ ಲಕ್ಷ್ಮಣ, ಬಾತಿ ಚಂದ್ರಶೇಖರ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀಕರ್, ಕಿರಿಯ ಅಭಿಯಂತರರಾದ ಅಕ್ಷತ ಕೆ. ಟಿ ಉಪಸ್ಥಿತರಿದ್ದರು.