ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ: ಹೈ ಕೋರ್ಟ್ ನಲ್ಲಿ ಪ್ರಶ್ನಿಸಲು ನಾಡೋಜ ಡಾ. ಮಹೇಶ ಜೋಶಿ ಸಿದ್ಧತೆ.

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಕೆನರಾ ಬ್ಯಾಂಕ್ ಸೇರಿದಂತೆ ಒಟ್ಟು 11 ಬ್ಯಾಂಕುಗಳಲ್ಲಿ ಖಾಲಿ ಇರುವ 3000 ಕ್ಕೂ ಹೆಚ್ಚು ಹುದ್ದೆಗಳಿಗೆ ಪರೀಕ್ಷೆಯನ್ನು ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ನಡೆಸಿ, ಕನ್ನಡಿಗರು ಉದ್ಯೋಗದಲ್ಲಿ ವಂಚಿತರಾಗುವುದನ್ನು ಖಂಡಿಸಿ, ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ಕನ್ನಡದಲ್ಲಿಯೂ ಪರೀಕ್ಷೆಯನ್ನು ನಡೆಸಿ ಕನ್ನಡಿಗರಿಗೆ ನ್ಯಾಯವನ್ನು ಒದಗಿಸಿಕೊಡಬೇಕೆಂದು ನಾಡೋಜ ಡಾ ಮಹೇಶ್ ಜೋಶಿ ಕೇಂದ್ರ ಸರ್ಕಾರದ ಆರ್ಥಿಕ ಇಲಾಖೆಯ ಕಾರ್ಯದರ್ಶಿಹಾಗೂ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ ಮುಖ್ಯಸ್ಥರನ್ನು ಒತ್ತಾಯಿಸಿದ್ದಾರೆ.
2. ಅಂದಿನ ವಿಜಯ ಬ್ಯಾಂಕಿನಲ್ಲಿ “ಸಿಬ್ಬಂದಿ ಅಧಿಕಾರಿ”ಯಾಗಿ ಸೇವೆ ಸಲ್ಲಿಸಿ, ನಂತರ ಕೇಂದ್ರ ಸರ್ಕಾರದ “ಕಾರ್ಮಿಕ ಆಯುಕ್ತ”ರಾಗಿ , ಬ್ಯಾಂಕುಗಳ ಆಡಳಿತ ಹಾಗೂ ಕಾರ್ಮಿಕ ಸಂಘಟನೆಗಳೊಂದಿಗೆ ಹೊಂದಿದ್ದ ಅತಿ ನಿಕಟ ಸಂಪರ್ಕದ ಹಿನ್ನೆಲೆಯಲ್ಲಿ , ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಆಳವಾದ ಅರಿವು ಹೊಂದಿರುವ ನಾಡೋಜ ಡಾ ಮಹೇಶ ಜೋಶಿಯವರು , ಒಂದು ವೇಳೆ ಕನ್ನಡದಲ್ಲಿ ಪರೀಕ್ಷೆಯನ್ನು ನಡೆಸದಿದ್ದರೆ, ಕರ್ನಾಟಕದ ಉಚ್ಚ ನ್ಯಾಯಾಲಯದ ಮೆಟ್ಟಿಲನ್ನೂ ಏರಿ, ಕಾನೂನಾತ್ಮಕವಾಗಿ ಹೋರಾಟಕ್ಕೆ ಇಳಿಯುವುದಾಗಿ ಎಚ್ಚರಿಸಿದ್ದಾರೆ. ಈ ನಿಟ್ಟಿನಲ್ಲಿ ವಕೀಲರ ನೋಟಿಸನ್ನೂ ಸಹ ಕಳಿಸುವುದಾಗಿ ಹೇಳಿದ್ದಾರೆ.
ನಾಡೋಜ ಡಾ ಮಹೇಶ
ಜೋಶಿ,
ವಿಶ್ರಾಂತ ಕೇಂದ್ರ ಕಾರ್ಮಿಕ ಆಯುಕ್ತರು ಹಾಗೂ
ವಿಶ್ರಾಂತ ಹೆಚ್ಚುವರಿ ಮಹಾ ನಿರ್ದೇಶಕರು ದೂರದರ್ಶನ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯ ಸೇವಾಕಾಂಕ್ಷಿ
9448490240