ಬರ ನಿರ್ವಣೆಗೆ ಈಗಾಗಲೇ 860 ಕೋಟಿ ರೂ. ನೀಡಲಾಗಿದೆ. ಜಿಲ್ಲಾಧಿಕಾರಿಗಳಿಗೆ 20-30 ಕೋಟಿ ರೂ. ಕೊಡಲಾಗಿದೆ
ದಾವಣಗೆರೆ – ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಪ್ರತಿ ಜಿಲ್ಲಾಧಿಕಾರಿಗೆ 20-30 ಕೋಟಿ ರೂ. ವರೆಗೆ ಹಣ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠಕ್ಕೆ ತೆರಳುವ ಮುನ್ನ ಹೆಲಿಪ್ಯಾಡ್ ನಲ್ಲಿ ಅವರುಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಪರಿ ನಿರ್ವಹಣೆಗಾಗಿ 860 ಕೋಟಿ ರೂ. ನೀಡಲಾಗಿದೆ. ಯಾವ ಕಾರಣಕ್ಕೂ ಕುಡಿಯುವ ನೀರು, ಮೇವಿಗೆ ತೊಂದರೆಯಾಗದಂತೆ, ಜನರು ಗುಳೆ ಹೋಗದಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಹೇಳಿದರು.
ತಾತ್ಕಾಲಿಕವಾಗಿ 34 ಲಕ್ಷ ರೈತರಿಗೆ 650 ಕೋಟಿ ರೂ. ಪ್ರತಿ ರೈತರಿಗೆ 2 ಸಾವಿರ ರೂ.ಗಳಂತೆತಾತ್ಕಾಲಿಕ ಪರಿಹಾರ ಕೊಟ್ಟಿದ್ದವೆ. ಆದರೆ ಕೇಂದ್ರ ಸರ್ಕಾರ ಐದು ತಿಂಗಳಾದರೂ ಇಂದಿಗೂ ಒಂದು ರೂಪಾಯಿ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.