ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಕರ್ನಾಟಕದ ವಿವಿಧ ಭಾಗಗಳಲ್ಲಿ ಮೇ 7ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 6ರ ಆಸುಪಾಸಿನಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ, ಅಂದರೆ ಮೇ 6ರ ಆಸುಪಾಸಿನಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮೋಚಾ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರ್ನಾಟಕದಲ್ಲಿ ಮೇ 7ರ ವರೆಗೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು-ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಬೆಳಗಾವಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಮೇ 7 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
