ಬಳ್ಳಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ್ ಅಮಾನತು

ಬಳ್ಳಾರಿ: ಕಲಾವಿದರಿಗೆ ಪಾವಿತಿಸಬೇಕಾದ ಸಂಭಾವನೆಗೆ ಹಣದ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ ಅವರನ್ನು ಅಮಾನತುಗೊಳಿಸಿ ಇಲಾಖೆಯ ನಿರ್ದೇಶಕರು ಆದೇಶಿಸಿದ್ದಾರೆ.

ಇಲಾಖೆವತಿಯಿಂದ ನೀಡಿದ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕಲಾವಿದರಿಗೆ ಪಾವಿತಿಸಬೇಕಾದ ಹಣಕ್ಕೆ ಸಿದ್ದಲಿಂಗೇಶ್ ಬೇಡಿಕೆ ಇಟ್ಟ ಬಗ್ಗೆ ಪತ್ರಿಕೆಗಳು ಹಾಗೂ ಸಾಮಾಜಿಕ ಜಾಲ ತಾಣಗಳಲ್ಲಿ ವರದಿಯಾಗಿದ್ದರ ಹಿನ್ನೆಲೆಯಲ್ಲಿ ಅವರನ್ನು ಅಮಾನತ್ತಿನಲ್ಲಿರಿಸಲಾಗಿದೆ.