ರಾಷ್ಟ್ರೀಯ ಸುದ್ದಿ

ಬೆಂಗಳೂರು – ದಾರವಾಡ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭಕ್ಕೆ ಕ್ಷಣಗಣನೆ

Bangalore - Darwada Vande Bharat Express Train,

ದಾವಣಗೆರೆ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಂಗಳೂರಿನಿಂದ ದಾವಣಗೆರೆ ಮಾರ್ಗವಾಗಿ ಧಾರವಾಡ ಸಂಚಾರಕ್ಕೆ ಸಜ್ಜಾಗಿದ್ದು, ಜೂನ್ 27 ರಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರಮೋದಿಯವರು ದೆಹಲಿಯಿಂದ ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಿಸಲಿದ್ದಾರೆ.

ಧಾರವಾಡದಿಂದ ಹೊರಟು ಮಧ್ಯಾಹ್ನ 1 ಗಂಟೆಗೆ ದಾವಣಗೆರೆ ಆಗಮಿಸಲಿದ್ದು, ಈ ಸಂದರ್ಭದಲ್ಲಿ ದಾವಣಗೆರೆ ರೈಲು ನಿಲ್ದಾಣದಲ್ಲಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅತ್ಯಾಧುನಿಕ ಅತಿ ವೇಗ ಹಾಗೂ ವಿಶ್ವಮಟ್ಟದ ಸವಲತ್ತುಗಳಿಂದ ರೂಪಿಸಲಾಗಿರುವ ಭಾರತೀಯ ರೈಲ್ವೆಯ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ನಿತ್ಯ ಬೆಂಗಳೂರು-ಧಾರವಾಡ ಮಧ್ಯೆ ಸಂಚಾರ ಮಾಡಲಿದ್ದು, ಯಶವಂತಪುರ, ದಾವಣಗೆರೆ ಮತ್ತು ಹುಬ್ಬಳ್ಳಿಯಲ್ಲಿ ನಿಲುಗಡೆ ಹೊಂದಿದೆ.

ಎಕ್ಸ್ ಪ್ರೆಸ್ ರೈಲು

                                                                 ಬೆಂಗಳೂರು – ದಾರವಾಡ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು

ಈ ಸಂದರ್ಭದಲ್ಲಿ ದಾವಣಗೆರೆ ನಿಲ್ದಾಣದಲ್ಲಿ ಸ್ವಾಗತ ಕಾರ್ಯಕ್ರಮ ಏರ್ಪಡಿಸಿದ್ದು, ಚುನಾಯಿತ ಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಸಂಘ – ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ನಾಗರೀಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನೈರುತ್ಯ ರೈಲ್ವೆ ಮುಖ್ಯ ವಾಣಿಜ್ಯ ನಿರೀಕ್ಷಕ ಬಿ. ವಿ. ರಾಕೇಶ್ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Most Popular

To Top