ಜಿಎಂಐಟಿ ಉದ್ಯೋಗಾಧಿಕಾರಿಗೆ ಉತ್ತಮ ನಾಯಕತ್ವ ಪ್ರಶಸ್ತಿ ಪ್ರಧಾನ
ದಾವಣಗೆರೆ: ಪುಣೆ ಮೂಲದ ಫ್ರೆಂಡ್ಸ್ ಯೂನಿಯನ್ ಫಾರ್ ಎನರ್ಜೈಸಿಂಗ್ ಲೈವ್ಸ್ ಸಂಸ್ಥೆಯು ದಿನಾಂಕ 6ನೇ ಸೋಮವಾರದಂದು ಪುಣೆಯ ಫಿಯಲ್ (FUEL) ಸಂಸ್ಥೆಯ ಆವರಣದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ನಗರದ ಪ್ರತಿಷ್ಠಿತ ಜಿಎಮ್ ತಾಂತ್ರಿಕ ಮಹಾ ವಿದ್ಯಾಲಯಕ್ಕೆ ಮೆಚ್ಚುಗೆಯ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.
ಫಿಯಲ್ ಸಂಸ್ಥೆಯು ಒಂದು ಎನ್ ಜಿಓ ಲಾಭ ರಹಿತ ಸಂಸ್ಥೆಯಾಗಿದ್ದು, ಅನೇಕ ವಿವಿಧ ಕೈಗಾರಿಕಾ ಚಟುವಟಿಕೆಗಳ ಮೂಲಕ ಮನೆ ಮಾತಾಗಿದ್ದು, ವಿದ್ಯಾರ್ಥಿಗಳಿಗೆ ಕೈಗಾರಿಕೆಗಳಿಗೆ ತಕ್ಕಂತೆ ತರಬೇತಿಯನ್ನು ನೀಡಲಾಗುತ್ತಿದೆ.
ಕೈಗಾರಿಕೆಗಳ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ ಈ ಚಟುವಟಿಕೆಗಳನ್ನ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ವನ್ನು ಹೆಚ್ಚಿಸುವಲ್ಲಿ ಮುಖ್ಯವಾದ ಪಾತ್ರವನ್ನು ವಹಿಸುತ್ತಿದೆ.
ಜಿಎಂಐಟಿ ಕಾಲೇಜು ಕಳೆದ ಐದು ವರ್ಷಗಳಿಂದ ವಿವಿಧ ಕಾರ್ಯಕ್ರಮಗಳನ್ನು ಫಿಯಲ್ ಸಂಸ್ಥೆಯ ಸಹಯೋಗದಲ್ಲಿ ನಡೆಸಿ ವಿದ್ಯಾರ್ಥಿಗಳನ್ನು ಕೈಗಾರಿಕೆಗಳಿಗೆ ತಕ್ಕಂತೆ ಸಜ್ಜುಗೊಳಿಸಿದೆ. ಕಾಲೇಜಿನ ಈ ಪ್ರಗತಿಯನ್ನು ಮನಗಂಡು, ಸಂಸ್ಥೆಯು ಜಿಎಂಐಟಿ ಕಾಲೇಜಿಗೆ ಮೆಚ್ಚುಗೆಯ ಪ್ರಮಾಣ ಪತ್ರವನ್ನು ನೀಡಿದ್ದಾರೆ. ಹಾಗೆಯೇ ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ರವರಿಗೆ ನಾಯಕತ್ವ ಪ್ರಶಸ್ತಿಯನ್ನು ಸಹ ನೀಡಿ ಅಭಿನಂದಿಸಿದ್ದಾರೆ.
ಜಿಎಂಐಟಿ ಕಾಲೇಜಿನ ಈ ಬೆಳವಣಿಗೆಗೆ, ಕಾಲೇಜಿನ ಚೇರ್ಮನ್ ಆದ ಶ್ರೀ ಜಿಎಂ ಲಿಂಗರಾಜು, ಆಡಳಿತಾಧಿಕಾರಿ ಶ್ರೀ ವೈಯೂ ಸುಭಾಷ್ ಚಂದ್ರ, ಪ್ರಾಂಶುಪಾಲರಾದ ಡಾ ಎಮ್ ಬಿ ಸಂಜಯ್ ಪಾಂಡೆ, ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಮತ್ತು ಅಧ್ಯಾಪಕ ವರ್ಗದವರು ಅಭಿನಂದಿಸಿದ್ದಾರೆ.