ಬಜೆಟ್‌ನಲ್ಲಿ ದಾವಣಗೆರೆಗೆ ಉತ್ತಮ ಕೊಡುಗೆ-ಹನಗವಾಡಿ ವೀರೇಶ್

ಬಜೆಟ್‌ನಲ್ಲಿ ದಾವಣಗೆರೆಗೆ ಉತ್ತಮ ಕೊಡುಗೆ

ದಾವಣಗೆರೆ :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್‌ನಲ್ಲಿ ದಾವಣಗೆರೆ ಜಿಲ್ಲೆಗೆ ಉತ್ತಮ ಕೊಡುಗೆಗಳನ್ನು ನೀಡಲಾಗಿದೆ ಎಂದು ಭಾರತೀಯ ಜನತಾ  ಪಕ್ಷದ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಿಲ್ಲೆಯಲ್ಲಿ ಶೋಧ ಮತ್ತು ಪಾರುಗಾಣಿಕಾ ಕಾರ್ಯಚರಣೆ ಬಲಪಡಿಸಲು ಹೊಸ ಎಸ್.ಡಿ.ಆರ್.ಎಫ್ ಕಂಪನಿ ಮಂಜೂರು ಮಾಡಲಾಗಿದೆ.

ಈ ವರ್ಷ ದಾವಣಗೆರೆ ವಿಮಾನ ನಿಲ್ದಾಣ ನಿರ್ಮಾಣ ಪ್ರಾರಂಭಿಸಲಾಗುವುದು. ಇದಕ್ಕಾಗಿ ಈಗಾಗಲೇ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲಾಗಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಹೊದಿಗೆರೆಯಲ್ಲಿರುವ ಶಹಾಜಿ ಮಹಾರಾಜರ ಸಮಾಧಿ ಅಭಿವೃದ್ಧಿಗೊಳಿಸಿ ಮೂಲ ಸೌಕರ್ಯ ಒದಗಿಸಲು 5 ಕೋಟಿ ರೂ. ನೀಡಲಾಗಿದೆ.

ಸಂತ ಸೇವಾಲಾಲ್ ಜನ್ಮಸ್ಥಳ ದಾವಣಗೆರೆ ಜಿಲ್ಲೆಯ ಸೂರಗೊಂಡನಕೊಪ್ಪ ಅಭಿವೃದ್ಧಿಗೆ 5 ಕೋಟಿ ರೂ. ನೀಡಲಾಗಿದೆ.

ಕನ್ನಡವನ್ನು ಹೊರ ಜಗತ್ತಿಗೆ ಪರಿಚಯಿಸುವ ಉದ್ದೇಶದಿಂದ ದಾವಣಗೆರೆಯಲ್ಲಿ 3ನೇ ವಿಶ್ವ ಕನ್ನಡ ಸಮ್ಮೇಳನ ಆಯೋಜನೆ ಮಾಡುವ ಕುರಿತು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಹೇಳಿದರು.

ಒಟ್ಟಾರೆಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ರೈತ, ಕಾರ್ಮಿಕ ಸ್ನೇಹಿಯಯಾಗಿದೆ. ಹಿಂದುಳಿದ ವರ್ಗದವರ ಪರವಾಗಿದೆ. ಹೆಣ್ಣು ಮಕ್ಕಳಿಗೆ ಹೆಚ್ಚು ಆಧ್ಯತೆ ನೀಡಲಾಗಿದೆ. ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗಲು, ಗ್ರಾಮೀಣ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯಕ್ಕೆ ಪ್ರಾತಿನಿಧ್ಯ ನೀಡಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ವಕ್ತಾರ ಡಿ.ಎಸ್. ಶಿವಶಂಕರ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಎ.ಹೆಚ್. ಶಿವಯೋಗಿಸ್ವಾಮಿ, ಶ್ರೀನಿವಾಸ ದಾಸಕರಿಯಪ್ಪ, ಶಿವರಾಜ ಪಾಟೀಲ್, ನರೇಶ್ ಹೊರಹಟ್ಟಿ, ಜಗದೀಶ್, ಬಸವರಾಜ ನಾಯ್ಕ, ಕೆ.ಎಂ. ಸುರೇಶ್, ವಿಶ್ವಾಸ್ ಇತರರಿದ್ದರು.

Leave a Reply

Your email address will not be published. Required fields are marked *

error: Content is protected !!