bhadra dam; ಅರೆ ನೀರಾವರಿ ಬೆಳೆಗಳಿಗೆ ಸಲಹೆ

ದಾವಣಗೆರೆ, ಆ.18: ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳಿಗೆ ಮತ್ತು 2023-24ನೇ ಸಾಲಿನ ಮುಂಗಾರು (Mansoon) ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಲ್ಲಿ (Bhadra Dam) ಲಭ್ಯವಿರುವ ನೀರಿನ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡು, ಅರೆನೀರಾವರಿ ಬೆಳೆಗಳಿಗೆ ಮಾತ್ರ ನೀರನ್ನು ಒದಗಿಸಲಾಗುವುದು.

ಮುಂಗಾರು ಹಂಗಾಮಿನ ಬೆಳೆಗಳಿಗೆ ನೀರಿನ ಬಳಕೆಯಲ್ಲಿ ಮಿತವ್ಯಯ ಸಾಧಿಸಿ, ಬೇಸಿಗೆ ಬೆಳೆಗೆ ನೀರು ಉಳಿಸುವ ಸಲುವಾಗಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಬಿದ್ದಾಗ ಮಳೆಯ ಪ್ರಮಾಣಕ್ಕನುಗುಣವಾಗಿ ಕಾಲುವೆಗಳಲ್ಲಿ ನೀರು ಹರಿಸಲಾಗುತ್ತಿದ್ದು, ಮುಂಗಾರು ಹಂಗಾಮಿನಲ್ಲಿ ರೈತರು (farmer) ಹೆಚ್ಚು ನೀರುಣಿಸುವ ಭತ್ತದ ಬೆಳೆಯನ್ನು ಹೊರತುಪಡಿಸಿ ಅರೆನೀರಾವರಿ ಬೆಳೆಗಳನ್ನು ಬೆಳೆಯಬೇಕು.

ಭದ್ರಾ ನಾಲೆಯ ಏರಿ ಮಣ್ಣು ಅಕ್ರಮ ಸಾಗಾಟ.! ಗೊತ್ತಿದ್ದು ಕಣ್ಮುಚ್ಚಿ ಕುಳಿತ ದಾವಣಗೆರೆ ಜಲಸಂಪನ್ಮೂಲ ಇಲಾಖೆ.!

ದಾವಣಗೆರೆ ಶಾಖಾ ನಾಲೆ ಅಚ್ಚುಕಟ್ಟು ಪ್ರದೇಶಕ್ಕೆ ಭತ್ತ, ಕಬ್ಬು 4000 ಹೆಕ್ಟೇರ್ ಕಬ್ಬು, ತೋಟಗಾರಿಕೆ 888 ಹೆಕ್ಟೇರ್, ಅರೆ ನೀರಾವರಿ 40,735 ಹೆಕ್ಟೇರ್ ಒಳಗೊಂಡಂತೆ ಒಟ್ಟು 45,623 ಹೆಕ್ಟೇರ್ ಮಾದರಿ ಬೆಳೆ ಬೆಳೆಯಲು ಹಾಗೂ ಈ ಬೆಳೆಗಳನ್ನು ಬೆಳೆಯದೆ ಇನ್ನಿತರೆ ಬೆಳೆಗಳನ್ನು ಬೆಳೆದರೆ ಜಲ ಸಂಪನ್ಮೂಲ ಇಲಾಖೆಯು ಜವಾಬ್ದಾರಿಯಾಗುವುದಿಲ್ಲ.

ಬೆಳೆ ಪದ್ಧತಿಯನ್ನು ಉಲ್ಲಂಘಿಸುವವರು, ನೀರಾವರಿ ಕಾಲುವೆ ಹಾಗೂ ಕಟ್ಟಡಗಳನ್ನು ಜಖಂಗೊಳಿಸುವವರು, ನಿಯಮಿತ ಪ್ರಮಾಣಕ್ಕಿಂತ ಹೆಚ್ಚು ನೀರನ್ನು ಬಳಸುವವರು ಮತ್ತು ಪಂಪ್ ಮಾಡಿ ಅನಧಿಕೃತವಾಗಿ ನೀರನ್ನು ಬಳಸಿಕೊಂಡು ನೀರಾವರಿ ಬೆಳೆಗಳನ್ನು ಬೆಳೆದು ನಿಯಮ ಉಲ್ಲಂಘನೆ ಮಾಡಿದಲ್ಲಿ ಪರಿಶೀಲಿಸಿ ಅಂತವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕನೀನಿನಿ, ನಂ.5 ಭದ್ರಾ ನಾಲಾ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!