Bhadra water; ಭದ್ರಾ ನೀರು ಹರಿಸಲು ಕರೆದಿರುವ ಐಸಿಸಿ ಸಭೆ ರದ್ದುಗೊಳಿಸಲು ಸಚಿವರಿಗೆ ಮನವಿ
ದಾವಣಗೆರೆ; ಭದ್ರಾ ನೀರು Bhadra water ಹರಿಸುವ ವೇಳಾಪಟ್ಟಿಯನ್ನು ಪರಿಷ್ಕರಿಸಲು ಸೆ.6 ರಂದು ಕರೆದಿರುವ ಐಸಿಸಿ ಸಭೆಯನ್ನು
ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನರವರು ರದ್ದುಪಡಿಸಿ, ದಾವಣಗೆರೆ ಜಿಲ್ಲೆಯ ರೈತರ ಹಿತ ಕಾಯಬೇಕು ಎಂದು ಬಿಜೆಪಿ ಮುಖಂಡ, ಮಾಜಿ ಎಪಿಎಂಸಿ ಅಧ್ಯಕ್ಷ ಕೊಳೇನಹಳ್ಳಿ ಬಿ ಎಂ ಸತೀಶ್ ರವರು ಒತ್ತಾಯಿಸಿದ್ದಾರೆ.
ಆಗಸ್ಟ್ 10 ರಿಂದ ಭದ್ರಾ ನಾಲೆಗಳಿಗೆ ನಿರಂತರ 100 ದಿನಗಳವರೆಗೆ ನೀರು ಹರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿತ್ತು. ಆದ್ದರಿಂದ
ದಾವಣಗೆರೆ ಜಿಲ್ಲೆಯಲ್ಲಿ ಸುಮಾರು 1.5 ಲಕ್ಷ ಎಕರೆ ಜಮೀನಿನಲ್ಲಿ ಭತ್ತದ ನಾಟಿ ಮಾಡಿದ್ದಾರೆ. ರೈತರು ಸಾಲ ಸೋಲ ಮಾಡಿ, ಭತ್ತದ ನಾಟಿಗೆ ಈಗಾಗಲೇ 2 ಬಾರಿ ಗೊಬ್ಬರ ಹಾಕಿದ್ದಾರೆ. ಸಾಕಷ್ಟು ಬಂಡವಾಳ ಸುರಿದಿದ್ದಾರೆ.
ಆದರೆ ಶಿವಮೊಗ್ಗ ಜಿಲ್ಲೆಯ ರೈತರ ಒತ್ತಡಕ್ಕೆ ಮಣಿದು ನೀರು ಹರಿಸುವ ವೇಳಾಪಟ್ಟಿಯನ್ನು ಪರಿಷ್ಕರಿಸಲು ಸೆ.6 ರಂದು ನೀರಾವರಿ ಸಲಹಾ ಸಮಿತಿ ಸಭೆ ಕರೆದಿರುವುದು ಸರಿಯಲ್ಲ ಎಂದವರು ಹೇಳಿದ್ದಾರೆ.