ಜಾತ್ಯಾತೀತ ರಾಷ್ಟ್ರ ನಿರ್ಮಾಣಕ್ಕೆ ಭಾರತ್ ಜೋಡೋ ಯಾತ್ರೆ ಸಹಕಾರಿ: ಹೆಚ್.ಬಿ.ಮಂಜಪ್ಪ

Bharat Jodo Yatra Contributor to Building a Secular Nation: HB Manjappa

ದಾವಣಗೆರೆ: ಭಾರತ ದೇಶವನ್ನು ಮತ್ತೊಮ್ಮೆ ಜಾತ್ಯಾತೀತವಾಗಿ ನಿರ್ಮಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಹಮ್ಮಿಕೊಂಡಿದ್ದ ಭಾರತ್ ಜೋಡೋ ಯಾತ್ರೆ ಸಂಪೂರ್ಣವಾಗಿ ಯಶಸ್ವಿಯಾಗಿದೆ ಎಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪನವರು ತಿಳಿಸಿದರು.

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 75ನೇ ಪುಣ್ಯಸ್ಮರಣೆ ಹಾಗೂ ಭಾರತ್ ಜೋಡೋ ಐಕ್ಯತಾ ಪಾದಯಾತ್ರೆಯ ಮುಕ್ತಾಯದ ಭಾಗವಾಗಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ್ಲ ರಾಷ್ಟ್ರ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.

ಭಾರತ್ ಜೋಡೋ ಯಾತ್ರೆಗೆ ದೇಶದ ಹಲವರು ಒಗ್ಗಟ್ಟಿನಿಂದ ಬೆಂಬಲಿಸಿದ್ದು ಯಾತ್ರೆ ಸಂಪೂರ್ಣವಾಗಿ ಯಶಸ್ವಿಗೊಂಡಿದ್ದು, ಮಹಾತ್ಮಗಾಂಧಿಯವರ ಆಶಯದಂತೆ ರಾಷ್ಟ್ರ ನಿರ್ಮಾಣಕ್ಕೆ ಯಾತ್ರೆ ಸಹಕಾರಿಯಾಗಲಿದೆ ಎಂದರು.

75 ವರ್ಷಗಳ ಹಿಂದೆ ಮಹಾತ್ಮಗಾಂಧಿಯವರನ್ನು ಕೊಲ್ಲುವ ಮೂಲಕ ದೇಶದಲ್ಲಿ ಅಶಾಂತಿ ಮುನ್ನುಡೆ ಬರೆದವರು ಇಂದು ದೇಶವನ್ನು ಆಳ್ವಿಕೆ ನಡೆಸುವ ಹೆಸರಿನಲ್ಲಿ ದೇಶದಲ್ಲಿ ಅಶಾಂತಿ ಸೃಷ್ಟಿಸುವ ಜೊತೆಗೆ ದೇಶವನ್ನು ಲೂಟಿ ಮಾಡಲಾಗುತ್ತಿದೆ ಎಂದರು.

ಇಂದು ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣೆಯ ದಿನವಾಗಿದ್ದು, ಅವರ ಚಿಂತನೆ, ಆದರ್ಶಗಳನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದೆ. ಮಹಾತ್ಮ ಗಾಂಧೀಜಿ ಮರಣ ಹೊಂದಿದ ದಿನವನ್ನು ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಹುತಾತ್ಮರ ದಿನವಾಗಿ ಆಚರಿಸಲಾಗುತ್ತಿದ್ದು, ಬಾಪು ಅವರ ಆಳವಾದ ಆಲೋಚನೆಗಳನ್ನು ಹಾಗೂ ರಾಷ್ಟ್ರ ಸೇವೆಯಲ್ಲಿ ಹುತಾತ್ಮರಾದ ಎಲ್ಲರನ್ನು ಸ್ಮರಿಸಿ ಹುತಾತ್ಮರ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ ಮತ್ತು ಭಾರತದ ಅಭಿವೃದ್ಧಿಗಾಗಿ ಕೆಲಸ ಮಾಡುವ ಕಾಂಗ್ರೆಸ್ ಪಕ್ಷದ ಸಂಕಲ್ಪವನ್ನು ಬಲಪಡಿಸುತ್ತದೆ ಎಂದರು.

ಸೇವಾದಳದ ಜಿಲ್ಲಾಧ್ಯಕ್ಷ ಡೋಲಿ ಚಂದ್ರು ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ. ವಕ್ತಾರ ಡಿ.ಬಸವರಾಜ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಮಲ್ಲಿಕಾರ್ಜುನ್, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಹೆಚ್.ಗುರುರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ.ಪರಶುರಾಮ್ ಕಾಂಗ್ರೆಸ್ ಮುಖಂಡ ಮುದೇಗೌಡ್ರು ಗಿರೀಶ್ ವಕೀಲರ ಘಟಕದ ಅಧ್ಯಕ್ಷ ಪ್ರಕಾಶ್ ಪಾಟೀಲ್, ಎಸ್.ಟಿ.ಘಟಕದ ಅಧ್ಯಕ್ಷ ಕೆ.ಎನ್.ಮಂಜುನಾಥ್, ಪಾಲಿಕೆ ಸದಸ್ಯ ಎ.ನಾಗರಾಜ್, ಸುಭಾನ್ ಸಾಬ್, ದ್ರಾಕ್ಷಾಯಣಮ್ಮ, ರಾಜೇಶ್ವರಿ, ಮೈನುದ್ದೀನ್, ಸತೀಶ್ ಶೆಟ್ಟಿ, ಅಲೆಕ್ಸಾಂಡರ್, ಎಸ್.ರವಿ, ದೇವರಹಟ್ಟಿ ಸಮೀವುಲ್ಲಾ ಜಮ್ನಳ್ಳಿ ನಾಗರಾಜ್, ವೀರಭದ್ರಪ್ಪ ಮತ್ತಿತರರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!