ಭಾರತದ ಮೂರು ಸೇನೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೇಲಿಕಾಪ್ಟರ್ ಅಪಘಾತ.! ಹಲವರ ಸಾವು..!!!
ಊಟಿ ತಮಿಳುನಾಡು: ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರಿನಲ್ಲಿ ಬುಧವಾರ ಪತನಗೊಂಡಿದೆ. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಹೆಲಿಕಾಪ್ಟರ್‌ನಲ್ಲಿ ಇದ್ದರು. ಘಟನೆಯಲ್ಲಿ ನಾಲ್ಕು ಜನರು ಮೃತಪಟ್ಟಿರುವುದು ದೃಢಪಟ್ಟಿದೆ.
ಇದೀಗ ಕೆಟ್ಟ ಸುದ್ದಿಯೊಂದು ತಮಿಳುನಾಡಿನ ಊಟಿಯಿಂದ ಬಂದಿದೆ. ಬ್ರಿಗೇಡಿಯರ್ ಜನರಲ್ ಪಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 14 ಸೈನಿಕರು ಕೊಯಮತ್ತೂರಿನಿಂದ ವೆಲ್ಲಿಂಗ್ಟನ್‌ಗೆ IAF Mi = 175V ಸೇನಾ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು.
ಜನರಲ್ ರಾವತ್ ಅವರ ಸ್ಥಿತಿಯ ಬಗ್ಗೆ ತಕ್ಷಣದ ಮಾಹಿತಿ ಇಲ್ಲ. ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ನಡೆಯುತ್ತಿದೆ. ಮೂಲಗಳ ಪ್ರಕಾರ ವಿಮಾನದಲ್ಲಿ ಹದಿನಾಲ್ಕು ಮಂದಿ ಇದ್ದರು.
ರಕ್ಷಿಸಲ್ಪಟ್ಟ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮೂರು ಸೇನೆಗಳ ಮುಖ್ಯಸ್ಥ ಸಿಡಿಎಸ್ ಬಿಪಿನ್ ರಾವತ್ ಹಾಗೂ ಅವರ ಕುಟುಂಬಸ್ಥರ ಬಗ್ಗೆ ಮಾಹಿತಿ ಸ್ಪಷ್ಟವಾಗಿಲ್ಲ. ಆದರೆ ತಮಿಳುನಾಡಿನ ಮೂಲಗಳ ಪ್ರಕಾರ ಏಳು ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಇನ್ನು ಅಧಿಕೃತ ಮಾಹಿತಿ ಹೊರಬಿದ್ದಿಲ್ಲ .
ಇನ್ನೂ ಮೂಲಗಳ ಪ್ರಕಾರ, ಸೇನಾ ಮುಖ್ಯಸ್ಥರನ್ನ ರಕ್ಷಣೆ ಮಾಡಲಾಗಿದ್ದು, 80 ರಷ್ಟು ಸುಟ್ಟ ಸ್ತಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕಿತ್ಸೆ ನೀಡಲಾಗುತ್ತಿದೆ ಅಂತಾ ರಾಷ್ಟ್ರೀಯ ಮಾಧ್ಯಮಗಳು ಹೇಳುತ್ತಿವೆ.
ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ, ರಕ್ಷಣಾ ಸಹಾಯಕರು, ಭದ್ರತಾ ಕಮಾಂಡೋಗಳು ಮತ್ತು ಐಎಎಫ್ ಪೈಲಟ್ ಅವರು ಮಿ-ಸಿರೀಸ್ ಚಾಪರ್‌ನಲ್ಲಿದ್ದ ಸಂದರ್ಭದಲ್ಲಿ ತಮಿಳುನಾಡಿನ ಕೊಯಮತ್ತೂರು ಮತ್ತು ಸೂಲೂರು ನಡುವೆ ಅಪಘಾತಕ್ಕೀಡಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.