ಭೋವಿ ಅಭಿವೃದ್ಧಿ ನಿಗಮಕ್ಕೆ 2 ಸಾವಿರ ಕೋಟಿ ಅನುದಾನ ಬೇಡಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮಕ್ಕೆ 2 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಭೋವಿ ಯುವ ವೇದಿಕೆಯ (ಕಾಂತಿ) ನೇತೃತ್ವದಲ್ಲಿ ಸೋಮವಾರ ಧರಣಿ ನಡೆಸಲಾಯಿತು.
ಅಖಿಲ ಕರ್ನಾಟಕ ಭೋವಿ, ಕಲ್ಲು -ಬಂಡೆ, ಮಣ್ಣು, ಕಟ್ಟಡ ಕಾರ್ಮಿಕ ವೇದಿಕೆ ಹಾಗೂ ಕಲ್ಲು ಬಂಡೆ ಕುಟ್ಟಿ ಕಾರರ ಹೋರಾಟ ಸಮಿತಿಯ ಸದ ಸ್ಯರೂ ಧರಣಿಯಲ್ಲಿ ಭಾಗವಹಿಸಿದ್ದರು.
ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದ ನೇಮಕಾತಿಯಲ್ಲಿ ಅಕ್ರಮಗ ಳಾಗಿವೆ. ಅನುದಾನವನ್ನೂ ದುರ್ಬಳಕೆ ಮಾಡಲಾಗಿದೆ. 2017ರಿಂದ ಈವರೆಗೂ ನಡೆದಿರುವ ಅವ್ಯವಹಾರದ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಭ್ರಷ್ಟ ಅಧಿಕಾರಿಗಳು ಹಾಗೂ ದಲ್ಲಾಳಿಗಳ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು.
‘ಗಣಿಗಾರಿಕೆ, ಅರಣ್ಯ ಹಾಗೂ ಪರಿಸರ ಸಂರಕ್ಷಣೆಯ ನೆಪವೊಡ್ಡಿ
ಸಮುದಾಯದ ಕುಲಕಸುಬನ್ನೇ ನಿರ್ಬಂಧಿಸಲಾಗಿದೆ. ಹೀಗಾಗಿ ಅನೇಕ ಕುಟುಂಬಗಳು ಬೀದಿಗೆ ಬಂದಿವೆ. ಕಲ್ಲು- ಬಂಡೆ ಒಡೆದು ಜೀವನ ಸಾಗಿಸುತ್ತಿದ್ದ ಬಡವರ ಮೇಲೆ ಹಲವು ಪ್ರಕರಣಗ ಳನ್ನು ದಾಖಲಿಸಲಾಗಿದೆ. ಇದರಿಂದ ಅವರು ವರ್ಷಗಟ್ಟಲೇ ನ್ಯಾಯಾಲಯಕ್ಕೆ ಅಲೆಯುವಂತಾಗಿದೆ. ಹೀಗಾಗಿ ಪ್ರಕರಣ ಗಳನ್ನೆಲ್ಲಾ ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು. ಸೈಜು ಕಲ್ಲು ಸಿದ್ದಪಡಿಸುವ ಹಾಗೂ ಬಂಡೆ ಒಡೆಯುವುದಕ್ಕೆ ಸಂಬಂಧಿಸಿದ ನೇರ ಗುತ್ತಿಗೆಯನ್ನು ಭೋವಿ ಸಮುದಾಯದವರಿಗೆ ಮಂಜೂರಾತಿ ನೀಡಬೇಕು ಎಂದು ಒತ್ತಾಯಿಸಿದರು.
ವಿಧಾನಸೌಧದ ಮುಂಭಾಗದಲ್ಲಿ ಭೋವಿ ಸಮುದಾಯದ ಆದಿಗುರು ಸಿದ್ಧರಾಮೇಶ್ವರರ ಕಂಚಿನ ಪುತ್ಥಳಿ ನಿರ್ಮಿಸಬೇಕು. ಸ್ವಾತಂತ್ರ್ಯ ಸೇನಾನಿ ಬೆಳವಡಿ ವಡ್ಡರ ಯಲ್ಲಣ್ಣ ಹೆಸರಿನಲ್ಲಿ ಪ್ರಾಧಿಕಾರ ರಚಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಅವೈಜ್ಞಾನಿಕ ಹಾಗೂ ಸಂವಿಧಾನ ಬಾಹಿರವಾಗಿರುವ ನ್ಯಾ. ಸದಾಶಿವ ಆಯೋಗದ ವರದಿ ‘ಯನ್ನು ರದ್ದುಪಡಿಸಬೇಕು, ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ಕೂಡಲೇ ನೇಮಕ ಮಾಡಬೇಕು. ಎಂದು ಅಖಿಲ ಕರ್ನಾಟಕ ಭೋವಿ ಯುವ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ವೈ.ಕೊಟ್ರೇಶ್ ತಿಳಿಸಿದರು.